ನಟಿ ಶ್ರೀಯಾ ಶರಣ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈಗ ಅವರು ‘ಕಬ್ಜ’ ಚಿತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ.
ಇತ್ತೀಚೆಗೆ ‘ನಮಾಮಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಟ್ರೆಡಿಷನಲ್ ಲುಕ್ನಲ್ಲಿ ಶ್ರೀಯಾ ಶರಣ್ ಅವರು ಗಮನ ಸೆಳೆದಿದ್ದಾರೆ. ಈ ಹಾಡಿನಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.
ಈ ಕಾರ್ಯಕ್ರಮದಲ್ಲಿ ಶ್ರೀಯಾ ಶರಣ್ ಅವರು ಸಖತ್ ಬೋಲ್ಡ್ ಆಗಿ ಮಿಂಚಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
‘ಕಬ್ಜ’ ಸಿನಿಮಾದಲ್ಲಿನ ಶ್ರೀಯಾ ಶರಣ್ ಪಾತ್ರ ಹೇಗಿದೆ ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.
‘ಕಬ್ಜ’ ಚಿತ್ರಕ್ಕೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿದೆ. ಈ ಚಿತ್ರದ ಟೈಟಲ್ ಟ್ರ್ಯಾಕ್ ಹಿಟ್ ಆಗಿದೆ.