ನಟಿ ಶುಭಾ ಪೂಂಜಾ ತಾಯಿ ಇನ್ನಿಲ್ಲ; ಅನಾರೋಗ್ಯದಿಂದ 70ನೇ ವಯಸ್ಸಿಗೆ ನಿಧನ

Updated on: Mar 07, 2025 | 4:27 PM

ಖ್ಯಾತ ನಟಿ ಶುಭಾ ಪೂಂಜಾ ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅವರ ತಾಯಿ ನಿಧನರಾಗಿದ್ದಾರೆ. ಈ ಬಗ್ಗೆ ಶುಭಾ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ತಾಯಿಯ ನಿಧನಕ್ಕೆ ಶುಭಾ ಪೂಂಜಾ ಅವರು ಭಾವುಕವಾಗಿ ಪೋಸ್ಟ್ ಮಾಡಿದ್ದಾರೆ.

1 / 5
ನಟಿ ಶುಭ ಪೂಂಜಾ ತಾಯಿ ಇನ್ನಿಲ್ಲ. ಮಾರ್ಚ್ 6ರಂದು ತಾಯಿ ಅಗಲಿದ್ದಾರೆ. ‘ಅಮ್ಮ ನನ್ನ ನೀನು ಯಾಕೆ ಬಿಟ್ಟು ಹೋದೆ, ನೀನು ಇಲ್ಲದೇ ನನಗೆ ಜೀವನವಿಲ್ಲ’ ಎಂದು ಶುಭ ಪೂಂಜಾ ಭಾವುಕವಾಗಿ ಬರೆದುಕೊಂಡಿದ್ದಾರೆ.

ನಟಿ ಶುಭ ಪೂಂಜಾ ತಾಯಿ ಇನ್ನಿಲ್ಲ. ಮಾರ್ಚ್ 6ರಂದು ತಾಯಿ ಅಗಲಿದ್ದಾರೆ. ‘ಅಮ್ಮ ನನ್ನ ನೀನು ಯಾಕೆ ಬಿಟ್ಟು ಹೋದೆ, ನೀನು ಇಲ್ಲದೇ ನನಗೆ ಜೀವನವಿಲ್ಲ’ ಎಂದು ಶುಭ ಪೂಂಜಾ ಭಾವುಕವಾಗಿ ಬರೆದುಕೊಂಡಿದ್ದಾರೆ.

2 / 5

‘ನಿನ್ನ ಬಿಟ್ಟು ನನಗೆ ಬದುಕಲು ಸಾಧ್ಯವಿಲ್ಲ. 24 ಗಂಟೆ ನಿನ್ನ ಜೊತೆ ಇರುತ್ತಿದ್ದೆ. ಈಗ ನಾನು ಏನು ಮಾಡಲಿ? ಎಲ್ಲಿ ಹೋಗಲಿ? ಯಾರಿಗೋಸ್ಕರ ವಾಪಸ್ಸು ಮನೆಗೆ ಬರಲಿ’ ಎಂದು ಶುಭಾ ಪೂಂಜಾ ಅವರು ಪೋಸ್ಟ್ ಮಾಡಿದ್ದಾರೆ.

3 / 5

‘ನೀನು ನನ್ನ ಯಾಕೆ ಬಿಟ್ಟು ಹೋದೆ? ನನ್ನ ಇಡೀ ಜೀವನಕ್ಕೆ ಅರ್ಥವಿಲ್ಲದೆ ಆಯ್ತು. ನನ್ನ ಇಡೀ ಜೀವನವೇ ನೀನಾಗಿದ್ದೆ. ನನ್ನ ಯಾಕೆ ಬಿಟ್ಟು ಹೋದೆ’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಶುಭಾ ಪೂಂಜಾ ಬರೆದುಕೊಂಡಿದ್ದಾರೆ.

4 / 5

ನ್ಯುಮೋನಿಯಾ ಅಟ್ಯಾಕ್ ಆಗಿ ಲಂಗ್ಸ್​ನಲ್ಲಿ ನೀರು ತುಂಬಿದ್ದ ಕಾರಣ ಆರೋಗ್ಯದಲ್ಲಿ ಏರುಪೇರಾಗಿತ್ತು. 70ನೇ ವಯಸ್ಸಿಗೆ ಶುಭಾ ಪೂಜಾ ತಾಯಿ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಎಲ್ಲರೂ ಶಾಂತಿ ಕೋರುತ್ತಿದ್ದಾರೆ.

5 / 5

ಕಳೆದ ನಾಲ್ಕು ತಿಂಗಳಿನಿಂದ ಶುಭಾ ಪೂಂಜಾ ಅವರು ತಾಯಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮಾರ್ಚ್​ 6ರಂದು ವಿಧಿವಶರಾದರು. ಅವರ ಆಸೆಯಂತೆ ಅಂತಿಮ ಕಾರ್ಯಗಳನ್ನು ಮಂಗಳೂರಿನಲ್ಲಿ ಮಾಡಲಾಗುತ್ತಿದೆ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us