Updated on: Dec 21, 2022 | 6:30 AM
ನಟಿ ಮೃಣಾಲ್ ಠಾಕೂರ್ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಸೂಪರ್ ಹಿಟ್ ಆಯಿತು.
ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.
‘ಸೀತಾ ರಾಮಂ’ ಚಿತ್ರ ತೆರೆಕಂಡ ನಂತರದಲ್ಲಿ ಮೃಣಾಲ್ ಅವರಿಗೆ ಬೇಡಿಕೆ ಹೆಚ್ಚಿದೆ. ಅವರನ್ನು ಹಲವು ಆಫರ್ಗಳು ಹುಡುಕಿಕೊಂಡು ಬಂದಿವೆ.
ಈಗ ಮೃಣಾಲ್ ಬ್ಯಾಕ್ಲೆಸ್ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.
ಮೃಣಾಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ.