- Kannada News Photo gallery Sita Ramam actress Mrunal Thakur new movie with Vijay Devarakonda: Muhurtha pics go viral
Mrunal Thakur: ಹೇಗಿತ್ತು ವಿಜಯ್ ದೇವರಕೊಂಡ-ಮೃಣಾಲ್ ಠಾಕೂರ್ ಹೊಸ ಚಿತ್ರದ ಮುಹೂರ್ತ? ಫೋಟೋ ಗ್ಯಾಲರಿ ನೋಡಿ..
Vijay Devarakonda: ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸ್ವತಃ ಮೃಣಾಲ್ ಠಾಕೂರ್ ಅವರು ಈ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.
Updated on: Jun 15, 2023 | 7:00 AM

ಟಾಲಿವುಡ್ನಿಂದ ಮೃಣಾಲ್ ಠಾಕೂರ್ ಅವರಿಗೆ ಅನೇಕ ಆಫರ್ಗಳು ಬರುತ್ತಿವೆ. ಹೊಸ ಸಿನಿಮಾದಲ್ಲಿ ಅವರು ವಿಜಯ್ ದೇವರಕೊಂಡ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಇಬ್ಬರ ಕಾಂಬಿನೇಷನ್ ಬಗ್ಗೆ ಅಭಿಮಾನಿಗಳಲ್ಲಿ ಸಖತ್ ನಿರೀಕ್ಷೆ ಮೂಡುವಂತಾಗಿದೆ.

‘ಗೀತ ಗೋವಿಂದಂ’ ತೆರೆಕಂಡ 6 ವರ್ಷಗಳ ನಂತರ ಆ ಚಿತ್ರದ ಹೀರೋ ಮತ್ತು ಡೈರೆಕ್ಟರ್ ಸಂಗಮ ಆಗುತ್ತಿದೆ. ವಿಜಯ್ ದೇವರಕೊಂಡ ಹಾಗೂ ನಿರ್ದೇಶಕ ಪರಶುರಾಮ್ ಅವರ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ ಈಗ ಮೂಡಿಬರಲಿದೆ. ಈ ಚಿತ್ರಕ್ಕೆ ಮೃಣಾಲ್ ನಾಯಕಿ.

ವಿಜಯ್ ದೇವರಕೊಂಡ ಮತ್ತು ಮೃಣಾಲ್ ಠಾಕೂರ್ ಅವರು ಜೋಡಿಯಾಗಿ ನಟಿಸಲಿರುವ ಈ ಸಿನಿಮಾ ಅದ್ದೂರಿಯಾಗಿ ಸೆಟ್ಟೇರಿದೆ. ಬುಧವಾರ (ಜೂನ್ 14) ಹೈದರಾಬಾದ್ನಲ್ಲಿ ಮುಹೂರ್ತ ನೆರವೇರಿಸಲಾಗಿದೆ. ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ಮುಹೂರ್ತ ಸಮಾರಂಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸ್ವತಃ ಮೃಣಾಲ್ ಠಾಕೂರ್ ಅವರು ಈ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಈ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಹಾಗೂ ಶಿರೀಶ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಮುಹೂರ್ತ ಸಮಾರಂಭದಲ್ಲಿ ನಿರ್ಮಾಪಕ ಶ್ಯಾಮ್ ಪ್ರಸಾದ್ ರೆಡ್ಡಿ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದರು. ಗೋವರ್ಧನ್ ರಾವ್ ದೇವರಕೊಂಡ ಮೊದಲ ಶಾಟ್ ನಿರ್ದೇಶಿಸಿದರು.

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್ ಇಂಟರ್ನೆಟ್) ಸಂಸ್ಥೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ.
Read More



