AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೀರೇಶ್’ ಚಿತ್ರಮಂದಿರದಲ್ಲಿ ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಉಚಿತ ಪ್ರದರ್ಶನ

ಆಮಿರ್ ಖಾನ್, ಜೆನಿಲಿಯಾ ದೇಶಮುಖ್ ಅಭಿನಯದ ‘ಸಿತಾರೆ ಜಮೀನ್ ಪರ್’ ಸಿನಿಮಾ ಎಲ್ಲ ಕಡೆಗಳಲ್ಲಿ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ವಿಶೇಷಚೇತನ ಮಕ್ಕಳ ಕುರಿತು ಈ ಸಿನಿಮಾ ಸಿದ್ಧವಾಗಿದೆ. ಆರ್​.ಎಸ್. ಪ್ರಸನ್ನ ನಿರ್ದೇಶನ ಮಾಡಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾಗೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿದೆ.

ಮದನ್​ ಕುಮಾರ್​
|

Updated on: Jun 25, 2025 | 5:10 PM

Share
ಡೌನ್ ಸಿಂಡ್ರಾಮ್ ಮತ್ತು ಆಟಿಸಂ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿಗಾಗಿ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ‘ವೀರೇಶ್’ ಚಿತ್ರಮಂದಿರದಲ್ಲಿ ‘ಸಿತಾರೆ ಜಮೀನ್ ಪರ್’ ಸಿನಿಮಾದ ಉಚಿತ ಪ್ರದರ್ಶನವನ್ನು ಮಂಗಳವಾರ (ಜೂನ್ 24) ಆಯೋಜಿಸಲಾಗಿತ್ತು.

1 / 5
ಹಿಂದಿ ಭಾಷೆಯ ಈ ಸಿನಿಮಾದಲ್ಲಿ ಆಮಿರ್ ಖಾನ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ವಿಶೇಷ ಚೇತನ ವ್ಯಕ್ತಿಗಳ ಕುರಿತು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಹಾಗಾಗಿ ಇಂಥ ಮಕ್ಕಳಿಗೆ ಉಚಿತವಾಗಿ ಈ ಚಿತ್ರವನ್ನು ಪ್ರದರ್ಶನ ಮಾಡಲಾಯಿತು.

2 / 5
‘ವಿಶೇಷ ಚೇತನ ಮಕ್ಕಳ ಮನಸ್ಸಿನಲ್ಲಿ ಈ ಸಿನಿಮಾ ಭರವಸೆ ಮೂಡಿಸುವಂತಿದೆ. ಆದ್ದರಿಂದ ಉಚಿತವಾಗಿ ಪ್ರದರ್ಶಿಸಲಾಯಿತು’ ಎಂದು ವಿರೇಶ್ ಚಿತ್ರಮಂದಿರದ ಮಾಲೀಕ ಕುಶಾಲ್ ಎಲ್.ಸಿ. ಹಾಗೂ ಆಯೋಜಕ ಬಿ.ಹೆಚ್. ಉಲ್ಲಾಸ್ ಗೌಡ ತಿಳಿಸಿದ್ದಾರೆ.

3 / 5
‘ಸಿತಾರೆ ಜಮೀನ್ ಪರ್’ ಸಿನಿಮಾದ ವಿಶೇಷ ಪ್ರದರ್ಶನದ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮಾ. ಹರೀಶ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಗಣ್ಯರು ಹಾಜರಿದ್ದು, ಪ್ರೋತ್ಸಾಹ ನೀಡಿದರು.

4 / 5
ಈ ಸಿನಿಮಾಗೆ ಆರ್​.ಎಸ್. ಪ್ರಸನ್ನ ಅವರು ನಿರ್ದೇಶನ ಮಾಡಿದ್ದಾರೆ. ಆಮಿರ್ ಖಾನ್ ಜೊತೆ ಜೆನಿಲಿಯಾ ದೇಶಮುಖ್ ಕೂಡ ನಟಿಸಿದ್ದಾರೆ. ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಸಿನಿಮಾ ನೋಡಿ ಹೊಗಳಿದರು.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ