ಬಾಳೆಹಣ್ಣು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿಯೋ ಅಷ್ಟೇ ತ್ವಚೆಗೂ ಒಳ್ಳೆಯದು. ಆ್ಯಂಟಿ ಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವ ಬಾಳೆಹಣ್ಣು ಚರ್ಮವನ್ನು ಮೃದುವಾಗಿ, ಹೊಳೆಯುವಂತೆ ಮಾಡುತ್ತದೆ. ಬಾಳೆಹಣ್ಣಿನಿಂದ ಮುಖದ ಸುಕ್ಕುಗಳು ನಿವಾರಣೆಯಾಗುತ್ತದೆ. ಬಾಳೆಹಣ್ಣಿನ ಫೇಸ್ ಪ್ಯಾಕ್ ಮುಖದಲ್ಲಿರುವ ಹೆಚ್ಚುವರಿ ಎಣ್ಣೆಯನ್ನು ಹೋಗಲಾಡಿಸುತ್ತದೆ. ಅಲ್ಲದೆ, ಇದು ಮೊಡವೆಗೆ ಕಾರಣವಾಗುವ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ. ಈ ಫೇಸ್ ಪ್ಯಾಕ್ ಮಾಡಲು, ಮನೆಯಲ್ಲಿ ಕೆಲವು ವಸ್ತುಗಳನ್ನು ಬಾಳೆಹಣ್ಣುಗಳೊಂದಿಗೆ ಬೆರೆಸಬಹುದು.