ಎಸ್​ಎಂ ಕೃಷ್ಣ ನಿಧನ: ಕರ್ನಾಟಕದ ಧೀಮಂತ ರಾಜಕಾರಣಿಯ ಚಿತ್ರ ನೋಟ ಇಲ್ಲಿದೆ

| Updated By: Ganapathi Sharma

Updated on: Dec 10, 2024 | 9:08 AM

ಕರ್ನಾಟಕದ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್​ಎಂ ಕೃಷ್ಣ ಕರ್ನಾಟಕದ ಅತ್ಯಂತ ಪ್ರಭಾವಿ ಮುಖ್ಯಮಂತ್ರಿಗಳಲ್ಲಿ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು. ಬಳಿಕ ರಾಜಕೀಯ ತಿರುವುಗಳಿಂದಾಗಿ ಅವರು ಬಿಜೆಪಿ ಸೇರ್ಪಡೆಗೊಂಡರು. ಎಸ್​ಎಂ ಕೃಷ್ಣ ಅವರ ಯಶೋಗಾಥೆ ಫೋಟೋಗ್ಯಾಲರಿ ಇಲ್ಲಿದೆ.

1 / 7
ಎಸ್​ಎಂ ಕೃಷ್ಣ ಅವರ ಪೂರ್ಣ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. 1932 ರಂದು ಮಂಡ್ಯ ಜಿಲ್ಲೆಯ ಸೋಮನಹಳ್ಳಿ (ಆಗಿನ ಮೈಸೂರು ರಾಜ್ಯ) ಅವರು ಜನಿಸಿದ್ದರು.

2 / 7
ಎಸ್​ಎಂ ಕೃಷ್ಣ ಅವರು ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004ರವರೆಗೆ ಕರ್ನಾಟಕದ ಸಿಎಂ ಆಗಿದ್ದರು. ಬಳಿಕ 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯಪಾಲರಾಗಿದ್ದರು. ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ಎಸ್​​​ಎಂ ಕೃಷ್ಣ ಸಿಎಂ ಆಗಿದ್ದಾಗ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ.

3 / 7
ಎಸ್​ಎಂ ಕೃಷ್ಣ ಕರ್ನಾಟಕದ ಅತ್ಯಂತ ಪ್ರಭಾವಿ ಮುಖ್ಯಮಂತ್ರಿಗಳಲ್ಲಿ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು. ಬಳಿಕ ರಾಜಕೀಯ ತಿರುವುಗಳಿಂದಾಗಿ ಅವರು ಬಿಜೆಪಿ ಸೇರ್ಪಡೆಗೊಂಡರು.

4 / 7
ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ 2023 ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿತ್ತು.

5 / 7
ಪಾಂಚಜನ್ಯ ಯಾತ್ರೆ ಮಾಡುವ ಮೂಲಕ ಕರ್ನಾಟಕದ ಮುಖ್ಯಮಂತ್ರಿಯಾದ ಎಸ್​ಎಂಕೃಷ್ಣ ಅವರು ತಮ್ಮ ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ.

6 / 7
ಬೆಂಗಳೂರನ್ನು ಐಟಿ-ಬಿಟಿ ಹಬ್​ ಆಗಿ ಮಾಡಲು ಇವರು ಪ್ರಮುಖ ಪಾತ್ರವಹಿಸಿದ್ದರು. ಭೂ ದಾಖಲೆಗಳ ಡಿಜಿಟಲೀಕರಣ ಮತ್ತು ಇತರ ಅನೇಕ ನಾಗರಿಕ ಸ್ನೇಹಿ ಉಪಕ್ರಮಗಳೊಂದಿಗೆ ವಿದ್ಯುತ್ ಸುಧಾರಣೆಗಳನ್ನು ರಚಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

7 / 7
ಅಷ್ಟೇ ಅಲ್ಲದೆ  ಡಾ. ರಾಜ್​ ಕುಮಾರ ಅವರನ್ನು ವೀರಪ್ಪನ್‌ನಿಂದ ಬಿಡಿಸಿಕೊಂಡು ಬರುವಲ್ಲಿ ಕೂಡ ಎಸ್​ಎಂ ಕೃಷ್ಣ ಪ್ರಮುಖ ಪಾತ್ರ ವಹಿಸಿದ್ದರು.

Published On - 6:33 am, Tue, 10 December 24