- Kannada News Photo gallery Sonal Monteiro And Tharun Sudhir visits Dharmasthala Cinema News in Kannada
ಧರ್ಮಸ್ಥಳದ ಮಂಜುನಾಥನ ಸನ್ನಿಧಾನದಲ್ಲಿ ಸೋನಲ್-ತರುಣ್ ದಂಪತಿ
ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಇಬ್ಬರೂ ವಿವಾಹ ಆಗಿದ್ದಾರೆ. ಕಳೆದ ವರ್ಷ ಅದ್ದೂರಿಯಾಗಿ ಈ ಮದುವೆ ನೆರವೇರಿದೆ. ಈಗ ಸೋನಲ್ ಹಾಗೂ ತರುಣ್ ದಂಪತಿ ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದಿದ್ದಾರೆ. ಈ ಸಂದರ್ಭದ ಫೊಟೋ ವೈರಲ್ ಆಗಿ ಗಮನ ಸೆಳೆದಿದೆ.
Updated on: Feb 27, 2025 | 11:58 AM

ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಕಳೆದ ವರ್ಷ ವಿವಾಹ ಆದರು. ಈಗ ಸಿನಿಮಾ ಕೆಲಸಗಳ ಜೊತೆ ಇವರು ವೈಯಕ್ತಿಕ ಜೀವನಕ್ಕೂ ಸಮಯ ನೀಡುತ್ತಾ ಇದ್ದಾರೆ. ಈಗ ತರುಣ್ ಹಾಗೂ ಸೋನಲ್ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ ತರುಣ್ ಹಾಗೂ ಸೋನಲ್. ಈ ಫೋಟೋಗಳನ್ನು ಸೋನಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳ ಗಮನ ಸೆಳೆದಿದೆ. ಫೋಟೋಗೆ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಸೋನಲ್ ಹಾಗೂ ತರುಣ್ ಭೇಟಿ ಮಾಡಿದ್ದಾರೆ. ಅವರಿಂದ ಆಶೀರ್ವಾದ ಪಡೆದಿದ್ದಾರೆ. ಇಬ್ಬರು ಸಾಂಪ್ರಾದಾಯಿಕ ಉಡುಗೆಯಲ್ಲಿ ಗಮನ ಸೆಳೆದಿದ್ದಾರೆ ಅನ್ನೋದು ವಿಶೇಷ.

ತರುಣ್ ಹಾಗೂ ಸೋನಲ್ ಅವರು ಒಂದೇ ಸಿನಿಮಾದಲ್ಲಿ ಕೆಲಸ ಮಾಡಿದವರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಕಳೆದ ವರ್ಷ ಈ ಪ್ರೀತಿಗೆ ದಂಪತಿ ಹೊಸ ಅರ್ಥವನ್ನು ನೀಡಿದರು. ಇವರು ಮದುವೆ ಆಗಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದ್ದಾರೆ.

ತರುಣ್ ಹಾಗೂ ಸೋನಲ್ ಅವರು ಹನಿಮೂನ್ಗಾಗಿ ಮಾಲ್ಡೀವ್ಸ್ಗೆ ತೆರಳಿದ್ದರು. ಅಲ್ಲಿ ಕ್ವಾಲಿಟಿ ಟೈಮ್ ಕಳೆದು ಬಂದಿದ್ದಾರೆ. ಮಾಲ್ಡೀವ್ಸ್ ಹೋಗಬೇಕು ಎಂಬುದು ತರುಣ್ ಕನಸಾಗಿತ್ತು. ಇದರ ಜೊತೆಗೆ ಅವರು ದೇವಸ್ಥಾನಗಳಿಗೂ ಭೇಟಿ ಕೊಡುತ್ತಾ ಇದ್ದಾರೆ.

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.
Read More




