Congress President Election: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮತ ಚಲಾಯಿಸಿದ ನಾಯಕರು
TV9 Web | Updated By: ಆಯೇಷಾ ಬಾನು
Updated on:
Oct 17, 2022 | 2:38 PM
22 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅಖಿಲ ಭಾರತ ಕಾಂಗ್ರೆಸ್ (AICC President Election)ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು ಮತದಾನ ನಡೆಯುತ್ತಿದೆ. ಅಕ್ಟೋಬರ್ 19ರಂದು ಫಲಿತಾಂಶ ಪ್ರಕಟವಾಗಲಿದೆ.
1 / 7
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿ ಶಶಿ ತರೂರ್ ಕೇರಳದಲ್ಲಿ ಮತ ಚಲಾಯಿಸಿದರು.
2 / 7
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಮತ ಚಲಾಯಿಸಿದರು.
3 / 7
ಭಾರತ್ ಜೋಡೋ ಯಾತ್ರೆ ನೇತಾರ, ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ಅವರು ಹಾಗೂ ಬಳ್ಳಾರಿಯ ಸಂಗನಕಲ್ಲು ವಿಶ್ರಾಂತಿ ತಾಣದಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ನಿಮಿತ್ತ ಸೋಮವಾರ ಮತ ಚಲಾಯಿಸಿದರು.
4 / 7
ಜನರಲ್ ಸೆಕರೇಟರಿ ಜಯರಾಮ್ ರಮೇಶ್ ದೆಹಲಿಯಲ್ಲಿ ಮತ ಚಲಾಯಿಸಿದರು.
5 / 7
ಕಾಂಗ್ರೆಸ್ ಪಾಲಿಗೆ ಇದೊಂದು ಐತಿಹಾಸಿಕ ದಿನ. ಇಂದು ಇಲ್ಲಿ 490 ಜನರು ಮತ ಚಲಾಯಿಸುತ್ತಿದ್ದಾರೆ. ಪಾರದರ್ಶಕವಾಗಿ ಮತದಾನ ನಡೆಯುತ್ತಿದೆ. ಇದರಿಂದ ದೇಶಕ್ಕೆ ಲಾಭ ಎಂದು ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಮತ ಚಲಾಯಿಸಿ ಮಾತನಾಡಿದರು.
6 / 7
ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ನಿಮಿತ್ತ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ದೆಹಲಿಯಲ್ಲಿ ಮತ ಚಲಾಯಿಸಿದರು.
7 / 7
ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಪಕ್ಷದ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲು ಮತ ಚಲಾಯಿಸಿದರು.
Published On - 2:37 pm, Mon, 17 October 22