
ಕನ್ನಡ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ನಟಿ ಶ್ರೀಲೀಲಾ, ತೆಲುಗು ಚಿತ್ರರಂಗದ ಬೇಡಿಕೆಯ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ಶ್ರೀಲೀಲಾ, ತೆಲುಗಿನ ಬೇಡಿಕೆಯ ನಟಿಯಾಗಿದ್ದು, ಕಡಿಮೆ ಅವಧಿಯಲ್ಲಿಯೇ ತೆಲುಗು ಚಿತ್ರರಂಗದ ಟಾಪ್ ನಟಿಯಾಗಿ ಹೆಸರು ಪಡೆದುಕೊಂಡಿದ್ದಾರೆ.

ಈಗಾಗಲೇ ಪವನ್ ಕಲ್ಯಾಣ್, ಮಹೇಶ್ ಬಾಬು, ಬಾಲಕೃಷ್ಣ, ರವಿತೇಜ ಇನ್ನೂ ಕೆಲವು ಸ್ಟಾರ್ ನಟರೊಟ್ಟಿಗೆ ನಟಿಸಿದ್ದಾರೆ ನಟಿ ಶ್ರೀಲೀಲಾ.

ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಶ್ರೀಲೀಲಾ, ಪರೀಕ್ಷೆಗಳು ಇದ್ದ ಕಾರಣ ಚಿತ್ರರಂಗದಿಂದ ಸಣ್ಣ ಬ್ರೇಕ್ ಪಡೆದುಕೊಂಡಿದ್ದರು. ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ.

ಈಗ ಮತ್ತೆ ಹೊಸ ತೆಲುಗು ಸಿನಿಮಾ ಒಂದನ್ನು ಶ್ರೀಲೀಲಾ ಒಪ್ಪಿಕೊಂಡಿದ್ದು, ಶೀಘ್ರವೇ ಸಿನಿಮಾದ ಚಿತ್ರೀಕರಣವನ್ನು ಸಹ ಪ್ರಾರಂಭಿಸಲಿದ್ದಾರೆ.

‘ಧಮಾಕ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ಮಾಸ್ ಮಹಾರಾಜ ರವಿತೇಜ ನಟನೆಯ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಲಿದ್ದಾರೆ.
