
ನಟಿ ಶ್ರೀಲೀಲಾ ಅವರು ತೆಲುಗಿನಲ್ಲಿ ದೊಡ್ಡ ಮಾರುಕಟ್ಟೆ ಸೃಷ್ಟಿ ಮಾಡಿಕೊಂಡಿದ್ದಾರೆ. ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈಗ ಅವರು ‘NBK108’ ಚಿತ್ರದ ಸೆಟ್ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ.

ಬಾಲಯ್ಯ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುತ್ತದೆ. ‘NBK 108’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಎನ್ನಲಾಗಿದೆ. ಕಥಾ ನಾಯಕ ನಂದಮೂರಿ ಬಾಲಕೃಷ್ಣ ಅವರ ತಂಗಿ ಆಗಿ ಶ್ರೀಲೀಲಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

‘NBK108’ ಚಿತ್ರಕ್ಕೆ ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿದ್ದಾರೆ. ತ್ರಿಶಾ, ಕಾಜಲ್ ಅಗರ್ವಾಲ್ ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗ ಶ್ರೀಲೀಲಾ ಕೂಡ ಸಿನಿಮಾದ ಸೆಟ್ ಸೇರಿದ್ದಾರೆ.

ಇತ್ತೀಚೆಗೆ ತೆರೆಗೆ ಬಂದ ಶ್ರೀಲೀಲಾ ನಟನೆಯ ‘ಧಮಾಕ’ ಚಿತ್ರ ಗೆದ್ದು ಬೀಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ನೂರು ಕೋಟಿ ರೂಪಾಯಿ ಬಾಚಿದೆ. ರವಿತೇಜ್ಗೆ ಜೊತೆಯಾಗಿ ಶ್ರೀಲೀಲಾ ಕಾಣಿಸಿಕೊಂಡಿದ್ದರು. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ.

ಶ್ರೀಲೀಲಾ ಕನ್ನಡದವರು. ಟಾಲಿವುಡ್ಗೆ ಹೋದ ನಂತರದಲ್ಲಿಯೂ ಕನ್ನಡದ ಬಗ್ಗೆ ಪ್ರೀತಿ ಇಟ್ಟುಕೊಂಡಿದ್ದಾರೆ. ತೆಲುಗು ನಾಡಿನಲ್ಲಿ ಕನ್ನಡದ ಬಗ್ಗೆ ಗೌರವ ವ್ಯಕ್ತಪಡಿಸಿದ ಸಾಕಷ್ಟು ಉದಾಹರಣೆ ಇದೆ.
Published On - 11:16 am, Fri, 10 March 23