
‘ಕೆಜಿಎಫ್ 2’ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ.

ಇದೀಗ ನಾಯಕಿ ಶ್ರೀನಿಧಿ ಶೆಟ್ಟಿ ತಮ್ಮ ಪಾತ್ರ ‘ರೀನಾ’ಳ ಡಬ್ಬಿಂಗ್ ಮುಗಿಸಿದ್ದಾರೆ.

ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಶ್ರೀನಿಧಿ, ‘ಏಪ್ರಿಲ್ 14ಕ್ಕೆ ಸಿಗೋಣ’ ಎಂದು ಬರೆದುಕೊಂಡಿದ್ದಾರೆ.

ಕೆಜಿಎಫ್ 2 ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಯಶ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ರವಿ ಬಸ್ರೂರು ಸಂಗೀತ ನೀಡಿರುವ, ವಿಜಯ್ ಕಿರಗಂದೂರು ನಿರ್ಮಾಣದ ಈ ಚಿತ್ರ ಏಪ್ರಿಲ್ 14ರಂದು ಎಲ್ಲೆಡೆ ತೆರೆಕಾಣಲಿದೆ.