Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudan Clashes: ಸುಡಾನ್​ ಮಿಲಿಟರಿ ಮತ್ತು ಪ್ಯಾರಾ ಮಿಲಿಟರಿ ನಡುವೆ ಗುಂಡಿನ ದಾಳಿ; ಸಂಕಷ್ಟದಲ್ಲಿ ಕನ್ನಡಿಗರು

ಶನಿವಾರ ಸುಡಾನ್ ಸೇನೆ ಮತ್ತು ದೇಶದ ಪ್ರಮುಖ ಅರೆಸೇನಾ ಗುಂಪಿನ ನಡುವೆ ನಡೆದ ಗುಂಡಿನ ಚಕಾಮಕಿಯಿಂದ ಇಡೀ ದೇಶವೇ ಬೆಚ್ಚಿಬಿದ್ದಿದೆ. ಘಟನೆಯಲ್ಲಿ ಅನೇಕ ಸಾವುನೋವುಗಳು ಸಂಭವಿಸಿದ್ದು, ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.

Rakesh Nayak Manchi
|

Updated on:Apr 16, 2023 | 7:15 PM

Gunfire between military and para-military in Sudan Kannadigas in distress

ಖಾರ್ಟೂಮ್ (ಸುಡಾನ್): ಸೇನೆ ಮತ್ತು ದೇಶದ ಪ್ರಮುಖ ಅರೆಸೇನಾ ಪಡೆಗಳ ನಡುವೆ ನಡೆದ ಗುಂಡಿನ ಚಕಾಮಕಿಯಿಂದ ಇಡೀ ದೇಶವೇ ಬೆಚ್ಚಿಬಿದ್ದಿದೆ. ಜನ ವಸತಿ ಪ್ರದೇಶದ ಮೇಲೆ ಗುಂಡಿನ ದಾಳಿ ನಡೆದಿದ್ದರಿಂದ ಅನೇಕ ಸಾವುನೋವುಗಳು ಸಂಭವಿಸಿದ್ದು, ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. (Image: AFP)

1 / 6
Gunfire between military and para-military in Sudan Kannadigas in distress

ದಾವಣಗೆರೆ ಜಿಲ್ಲೆಯ ಎಂಟು ಜನ ಸೇರಿ ಕರ್ನಾಟಕದ 31 ಜನರು ಇವರು ವಾಸವಾಗಿರುವ ಮನೆಗಳ ಮೇಲೂ ಗುಂಡಿನ ದಾಳಿ ನಡೆದಿದ್ದು, ನೀರು ಆಹಾರ ವಿಲ್ಲದೆ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಖಾರ್ಟೂಮ್ ನಗರದಲ್ಲಿ ಒಂದೇ ಮನೆಯಲ್ಲಿ ವಾಸ ಇರುವ 31 ಜನ‌ ದಾವಣಗೆರೆ ಶಿವಮೊಗ್ಗ ಹಾಗೂ‌ ಮೈಸೂರಿನ ‌ಕೂಲಿ ಕಾರ್ಮಿಕರಾಗಿದ್ದಾರೆ. ಕಳೆದ ಐದು ವರ್ಷದಿಂದ ಕೆಲಸ ಹುಡುಕಿಕೊಂಡು ಸುಡಾನ್ ಹೋಗಿದ್ದರು. ಸದ್ಯ ಗುಂಡಿನ ದಾಳಿಯಿಂದಾಗಿ ಕನ್ನಡಿಗರು ಆತಂಕದಲ್ಲಿದ್ದಾರೆ. (ಫೋಟೋ- ಸಂಕಷ್ಟದಲ್ಲಿರುವ ಕನ್ನಡಿಗರು)

2 / 6
Gunfire between military and para-military in Sudan Kannadigas in distress

ಕರ್ನಾಟಕದ ಕಾರ್ಮಿಕರು ವಾಸ ಇರುವ ಕಟ್ಟಡಕ್ಕೂ ಗುಂಡಿನ‌ದಾಳಿ ನಡೆದಿದ್ದು, ಭೀತಿಗೊಂಡಿರುವ ಕನ್ನಡಿಗರು ನೆರವಾಗುವಂತೆ ಟಿವಿ9ಗೆ ಮನವಿ ಮಾಡಿದ್ದಾರೆ. ಘಟನೆಯ ಫೋಟೋ, ವಿಡಿಯೋಗಳನ್ನು ಟಿವಿ9ಗೆ ಕಳುಹಿಸಿದ ಕನ್ನಡಿಗರು ಸರ್ಕಾರದ ಗಮನಕ್ಕೆ ತರುವಂತೆ ವಿನಂತಿಸುತ್ತಿದ್ದಾರೆ. ಸದ್ಯ ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ಪೈಕಿ ಬಹುತೇಕರು ಗಿಡಮೂಲಿಕೆಗಳ ಔಷಧಿ ಮಾರಾಟ ಮಾಡಲು ಹೋದವರಾಗಿದ್ದಾರೆ. ಜೊತೆಗೆ ಕೂಲಿ ಕೆಲಸ ಸಹ ಮಾಡುತ್ತಿದ್ದಾರೆ. (Image: AFP)

3 / 6
Gunfire between military and para-military in Sudan Kannadigas in distress

ಕನ್ನಡಿಗರು ಕಳುಹಿಸಿದ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಹೇಳಿದಂತೆ, ಸುತ್ತಮುತ್ತ ಗುಂಡಿನ ದಾಳಿಗಳು ನಡೆದಿವೆ. ಮಾಹಿತಿ ಪ್ರಕಾರ ರಾಕೇಟ್ ದಾಳಿಗಳು ನಡೆಯುವ ಹಾಗೂ ವಿಮಾನದ ಮೂಲಕ ಬಾಂಬ್​ಗಳನ್ನು ಹಾಕುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಅಲ್ಲದೆ, ಗುಂಡಿನ ದಾಳಿ ಹಿನ್ನೆಲೆ ಸ್ಥಳಾಂತರಗೊಳ್ಳುವಂತೆ ಕನ್ನಡಿಗರು ನೆಲೆಸಿರುವ ಕಟ್ಟದಲ್ಲಿರುವ ಪೊಲೀಸ್ ಸಿಬ್ಬಂದಿಯೊಬ್ಬರು ಹೇಳಿದ್ದಾಗಿ ತಿಳಿಸಿದ್ದಾರೆ. (Image: AP)

4 / 6
Gunfire between military and para-military in Sudan Kannadigas in distress

ಸದ್ಯ ಕನ್ನಡಿಗರು ನೆಲೆಸಿರುವ ಖಾರ್ಟೂಮ್ ನಗರದಲ್ಲಿರುವ ಜನರು ಭೀತಿಯಿಂದ ಇದ್ದು, ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರ ನೆರವಿಗೆ ದಾವಿಸುವಂತೆ ಮನವಿ ಮಾಡುತ್ತಿದ್ದಾರೆ. ಕೇರಳದ ವ್ಯಕ್ತಿಯೊಬ್ಬರು ಶನಿವಾರ (ಏಪ್ರಿಲ್ 15) ಸುಡಾನ್‌ನಲ್ಲಿ ಗುಂಡಿನ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಕಣ್ಣೂರು ಜಿಲ್ಲೆಯಲ್ಲಿ ಅವರ ಕುಟುಂಬಕ್ಕೆ ಮಾಹಿತಿ ತಿಳಿಸಲಾಗಿದೆ. ಅಳಕೋಡು ಪಂಚಾಯಿತಿ ವ್ಯಾಪ್ತಿಯ ನೆಲ್ಲಿಪ್ಪರ ಗ್ರಾಮದ ಆಲ್ಬರ್ಟ್ ಆಗಸ್ಟಿನ್ (48) ಮೃತ ಭಾರತೀಯ. (Photo: Soumyaranjan)

5 / 6
Gunfire between military and para-military in Sudan Kannadigas in distress

ಸುಡಾನ್‌ನ ರಾಜಧಾನಿ ಖಾರ್ಟೂಮ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಆಲ್ಬರ್ಟ್ ಸಾವನ್ನು ದೃಢಪಡಿಸಿದೆ ಮತ್ತು ಮುಂದಿನ ವ್ಯವಸ್ಥೆಗಳಿಗಾಗಿ ಕುಟುಂಬ ಮತ್ತು ವೈದ್ಯಕೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಟ್ವೀಟ್ ಮಾಡಿದೆ. ಆಲ್ಬರ್ಟ್ ಸುಡಾನ್‌ನ ದಾಲ್ ಗ್ರೂಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. (Image: twitter/RuthNesoba)

6 / 6

Published On - 7:12 pm, Sun, 16 April 23

Follow us
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ