Swara Bhaskar: ಸೈಲೆಂಟ್ ಆಗಿ ಮದುವೆ ಆದ ನಟಿ ಸ್ವರಾ ಭಾಸ್ಕರ್; ಪತಿ ಫಹಾದ್ ಅಹ್ಮದ್ ಜತೆಗಿನ ಫೋಟೋ ವೈರಲ್
Swara Bhaskar Marriage Photos: ಸ್ವರಾ ಭಾಸ್ಕರ್ ಅವರು ಸಡನ್ ಆಗಿ ಮದುವೆ ಆಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಪ್ರಿಯಕರ ಫಹಾದ್ ಅಹ್ಮದ್ ಜೊತೆ ಅವರ ವಿವಾಹ ನೆರವೇರಿದೆ.
Updated on:Feb 16, 2023 | 10:51 PM

ನಟಿ ಸ್ವರಾ ಭಾಸ್ಕರ್ ಅವರು ಏಕಾಏಕಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆ ಮೂಲಕ ಅವರು ಸರ್ಪ್ರೈಸ್ ನೀಡಿದ್ದಾರೆ. ಅವರ ಈ ನಡೆಯಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಅವರಿಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಸಮಾಜವಾದಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಫಹಾದ್ ಅಹ್ಮದ್ ಜೊತೆ ಸ್ವರಾ ಭಾಸ್ಕರ್ ಅವರ ಮದುವೆ ನೆರವೇರಿದೆ. ರಿಜಿಸ್ಟರ್ ಮ್ಯಾರೇಜ್ ಮಾಡಿಕೊಳ್ಳುವ ಮೂಲಕ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ.

ಸ್ವರಾ ಭಾಸ್ಕರ್ ಮತ್ತು ಫಹಾದ್ ಅಹ್ಮದ್ ಅವರು ಒಂದಷ್ಟು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈ ವಿಚಾರವನ್ನು ಅವರಿಬ್ಬರು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಸಡನ್ ಆಗಿ ಮದುವೆ ಸುದ್ದಿ ಹಂಚಿಕೊಂಡಿದ್ದಾರೆ.

ಅಂತರ್ ಧರ್ಮೀಯ ವಿವಾಹ ಆಗಿರುವುದರಿಂದ ಕೆಲವರು ಈ ಜೋಡಿಯನ್ನು ಟ್ರೋಲ್ ಮಾಡುತ್ತಿದ್ದಾರೆ. ಒಂದಷ್ಟು ನೆಗೆಟಿವ್ ಕಮೆಂಟ್ಗಳು ಬರುತ್ತಿವೆ. ಅವುಗಳಿಗೆ ಸ್ವರಾ ಭಾಸ್ಕರ್ ಮತ್ತು ಫಹಾದ್ ಅಹ್ಮದ್ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ಬಾಲಿವುಡ್ನ ಅನೇಕ ಸಿನಿಮಾಗಳಲ್ಲಿ ಸ್ವರಾ ಭಾಸ್ಕರ್ ನಟಿಸಿದ್ದಾರೆ. ಚಿಕ್ಕ ಪಾತ್ರಗಳ ಮೂಲಕವೂ ಅವರು ಗಮನ ಸೆಳೆದಿದ್ದಾರೆ. ದೇಶದಲ್ಲಿನ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಮೂಲಕ ಅವರು ಅನೇಕ ಬಾರಿ ವಿವಾದ ಮೈಮೇಲೆ ಎಳೆದುಕೊಂಡಿದ್ದೂ ಇದೆ.
Published On - 10:51 pm, Thu, 16 February 23

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್ ಇಂಟರ್ನೆಟ್) ಸಂಸ್ಥೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ.
Read More



