
ಸ್ಯಾಂಡಲ್ವುಡ್ನಲ್ಲಿ ಸಾಲು ಸಾಲು ಹಿಟ್ ಚಿತ್ರಗಳನ್ನು ಕೊಟ್ಟವರು ಭಾವನಾ ಮೆನನ್.

ಇದೀಗ ಮಲಯಾಳಂ ಚಿತ್ರರಂಗಕ್ಕೆ ಮರಳಿರುವ ನಟಿ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

‘ಟಗರು’, ‘ಜಾಕಿ’ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ಸ್ಟಾರ್ ನಟರೊಂದಿಗೆ ಬಣ್ಣಹಚ್ಚಿದ ಭಾವನಾ ಇದೀಗ ಕನ್ನಡದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ ಎಂದಿವೆ ವರದಿಗಳು.

ವಿಶೇಷವೆಂದರೆ ಹೊಸ ಚಿತ್ರದಲ್ಲಿ ಭಾವನಾ ದ್ವಿಪಾತ್ರದಲ್ಲಿ ಅದೂ ಕೂಡ ಅವಳಿ ಸಹೋದರಿಯರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಬಗ್ಗೆ ಮತ್ತಷ್ಟು ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಭಾವನಾ ಇತ್ತೀಚೆಗೆ ಹಂಚಿಕೊಂಡ ಫೋಟೋಗಳು ಅಭಿಮಾನಿಗಳ ಮನಗೆದ್ದಿದೆ.