
ಆಂಧ್ರ ಪ್ರದೇಶ ತೆರಿಗೆ ಇಲಾಖೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಲವು ಅಧಿಕಾರಿಗಳು ಭಾಗಿ ಆಗಿದ್ದರು. ವಿಜಯನಗರಂ ಜಿಲ್ಲೆಯ ತಹಶೀಲ್ದಾರ್ ಪ್ರಸಾದ್ ರಾವ್ ಅವರು ‘ಕಾಂತಾರ’ ಸಿನಿಮಾದ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.

‘ಕಾಂತಾರ’ ಚಿತ್ರದ ಹಾಡಿಗೆ ವೇದಿಕೆಯಲ್ಲಿ ತಹಶೀಲ್ದಾರ್ ಪ್ರಸಾದ್ ರಾವ್ ಪರ್ಫಾರ್ಮ್ ಮಾಡಿದರು. ಸರ್ಕಾರಿ ಅಧಿಕಾರಿಗಳ ನಡುವೆ ನಡೆದ ಈ ಸ್ಪರ್ಧೆಯಲ್ಲಿ ಅವರಿಗೆ ಪ್ರಥಮ ಬಹುಮಾನ ನೀಡಲಾಗಿದೆ. ಅವರು ಕೆಲವು ಫೋಟೋಗಳು ವೈರಲ್ ಆಗಿವೆ.

ಪರಭಾಷೆಯ ಪ್ರೇಕ್ಷಕರ ಮೇಲೆ ಕನ್ನಡದ ‘ಕಾಂತಾರ’ ಸಿನಿಮಾ ಸಾಕಷ್ಟು ಪ್ರಭಾವ ಬೀರಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಭೂತಕೋಲದ ವೇಷ ಧರಿಸಿ ಬಂದ ತಹಶೀಲ್ದಾರ್ ಜೊತೆ ಫೋಟೋ ತೆಗೆದುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದಿದ್ದಾರೆ.

ಪ್ರಸಾದ್ ರಾವ್ ಅವರಿಗೆ ಕಲೆಯಲ್ಲಿ ಹೆಚ್ಚು ಆಸಕ್ತಿ ಇದೆ. ವೇದಿಕೆಯಲ್ಲಿ ಅವರು ‘ಕಾಂತಾರ’ ಚಿತ್ರದ ರೀತಿ ವೇಷ ಹಾಕಿಕೊಂಡು ಡ್ಯಾನ್ಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಆ ಬಳಿಕ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಗಲ್ಲಾಪೆಟ್ಟಿಗೆಯಲ್ಲಿ ‘ಕಾಂತಾರ’ ಸಿನಿಮಾ ಮೋಡಿ ಮಾಡಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ತೆಲುಗು ವರ್ಷನ್ನಿಂದ ಈ ಚಿತ್ರಕ್ಕೆ 60 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಟಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಕೂಡ ಚಿತ್ರವನ್ನು ಕೊಂಡಾಡಿದ್ದಾರೆ.