Auto Expo 2023: ಟಾಟಾ ಪಂಚ್, ಆಲ್ಟ್ರೊಜ್ ಸಿಎನ್ ಜಿ ವರ್ಷನ್ ಅನಾವರಣ

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಜೊತೆಗೆ ಸಿಎನ್ ಜಿ ಕಾರುಗಳ ಅಬ್ಬರವು ಕೂಡಾ ಹೆಚ್ಚುತ್ತಿದೆ. ಸಿಎನ್ ಜಿ ಕಾರುಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ ಕಂಪನಿ ಇದೀಗ ಮತ್ತಷ್ಟು ಹೊಸ ಸಿಎನ್ ಜಿ ವರ್ಷನ್ ಬಿಡುಗಡೆ ಮಾಡುತ್ತಿದೆ. ಸಣ್ಣ ಕಾರುಗಳ ವಿಭಾಗದಲ್ಲಿ ಭಾರೀ ಬೇಡಿಕೆ ಹೊಂದಿರುವ ಪಂಚ್ ಮತ್ತು ಆಲ್ಟ್ರೊಜ್ ಕಾರುಗಳಲ್ಲಿ ಶೀಘ್ರದಲ್ಲಿಯೇ ಸಿಎನ್ ಜಿ ಮಾದರಿ ಪರಿಚಯಿಸಲಾಗುತ್ತಿದ್ದು, ಹೊಸ ಕಾರುಗಳನ್ನ ದೆಹಲಿ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿದೆ.

Praveen Sannamani
|

Updated on: Jan 13, 2023 | 8:50 PM

2023ರಿಂದ ಕೇಂದ್ರ ಸರ್ಕಾರವು  ಜಾರಿಗೆ ತರುತ್ತಿರುವ ರಿಯಲ್ ಎಮಿಷನ್ ಪರಿಣಾಮ ಕಾರು ಉತ್ಪಾದನಾ ಕಂಪನಿಗಳು ಪರಿಸರ ಸ್ನೇಹಿ ಕಾರು ಮಾದರಿಗಳತ್ತ ಮುಖ ಮಾಡುತ್ತಿವೆ. ಪೆಟ್ರೋಲ್ ಮತ್ತು ಡೀಸೆಲ್ ಕಾರಗಳಿಗೆ ಪರ್ಯಾಯವಾಗಿ ಪರಿಸರ ಸ್ನೇಹಿಯಾಗಿರುವ ಸಿಎನ್ ಜಿ ಕಾರುಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿವೆ.

1 / 8
ಪ್ರಸ್ತುತ ಕಾರು ಮಾರುಕಟ್ಟೆಯಲ್ಲಿ ಸಿಎನ್ ಜಿ ಕಾರುಗಳು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಡೀಸೆಲ್ ಕಾರುಗಳಿಗೆ ಇವು ಭರ್ಜರಿ ಪೈಪೋಟಿ ನೀಡುತ್ತಿವೆ. ಹೀಗಾಗಿ ಶೀಘ್ರದಲ್ಲಿಯೇ ಹಲವು ಕಾರು ಉತ್ಪಾದನಾ ಕಂಪನಿಗಳು ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರುಗಳಲ್ಲಿ ಸಿಎನ್ ಜಿ ವರ್ಷನ್ ಬಿಡುಗಡೆ ಮಾಡುತ್ತಿವೆ.

2 / 8
ಕಡಿಮೆ ನಿರ್ವಹಣಾ ವೆಚ್ಚ ಮತ್ತು ಹೆಚ್ಚಿನ ಇಂಧನ ದಕ್ಷತೆ ಕಾರಣಕ್ಕೆ ಸಿಎನ್ ಜಿ ಮಾರಾಟವು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲಿಯೇ ಟಾಟಾ ಮೋಟಾರ್ಸ್ ಕಂಪನಿ ಮತ್ತಷ್ಟು ಹೊಸ ಸಿಎನ್ ಜಿ ಕಾರುಗಳನ್ನು ಬಿಡುಗಡೆ ಮಾಡಲು ಮುಂದಾಗಿದೆ. ಮುಂಬರುವ ದಿನಗಳಲ್ಲಿ ಕಂಪನಿಯು ಪಂಚ್ ಮತ್ತು ಆಲ್ಟ್ರೊಜ್ ಕಾರುಗಳಲ್ಲಿ ಸಿಎನ್​ಜಿ ವರ್ಷನ್ ಬಿಡುಗಡೆ ಮಾಡುತ್ತಿದೆ.

3 / 8
ಹೊಸ ಸಿಎಸ್ ಜಿ ಕಾರುಗಳ ಬಿಡುಗಡೆಗೂ ಮುನ್ನ ದೆಹಲಿ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲಾಗಿದ್ದು, ಹೊಸ ಕಾರುಗಳು ಟಾಟಾ ಕಂಪನಿಯ ಸುಧಾರಿತ ಐ ಸಿಎನ್ ಜಿ ತಂತ್ರಜ್ಞಾನ ಪ್ರೇರಣೆ ಹೊಂದಿವೆ.  ಐ-ಸಿಎನ್​ಜಿ ತಂತ್ರಜ್ಞಾನದ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ಪ್ರತಿಸ್ಪರ್ಧಿ ಕಂಪನಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

4 / 8
ಹೊಸ ಪಂಚ್ ಮತ್ತು ಆಲ್ಟ್ರೊಜ್ ಸಿಎನ್ ಜಿ ಕಾರುಗಳಲ್ಲಿ 1.2 ಲೀಟರ್ ಪೆಟ್ರೋಲ್ ಎಂಜಿನ್ ಜೊತೆ ಐ-ಸಿಎನ್​ಜಿ ಕಿಟ್ ಜೋಡಿಸಲಾಗಿದೆ. ಈ ಬಾರಿ ಸಿಎನ್ ಜಿ ಕಾರುಗಳಲ್ಲಿ ಟಾಟಾ ಕಂಪನಿಯು ಹೊಸದಾಗಿ ಟ್ವಿನ್ ಸಿಲಿಂಡರ್ ಟ್ಯಾಂಕ್ ಅಭಿವೃದ್ದಿಪಡಿಸಿದ್ದು, ಹೊಸ ವಿನ್ಯಾಸದಿಂದಾಗಿ ಬೂಟ್ ಸ್ಪೆಸ್ ಹೆಚ್ಚಳವಾಗಲಿದೆ.

5 / 8
ಸಾಮಾನ್ಯವಾಗಿ ಸಿಎನ್‌ ಜಿ ಕಾರುಗಳಲ್ಲಿ ಬೂಟ್ ಸ್ಪೆಸ್ ಕಡಿಮೆ ಎನ್ನುವ ಗ್ರಾಹಕರ ಅಸಮಾಧಾನವನ್ನ ಕಡಿಮೆ ಮಾಡಲು ಟಾಟಾ ಕಂಪನಿಯು ಟ್ವಿನ್ ಸಿಲಿಂಡರ್ ಟ್ಯಾಂಕ್ ಪರಿಚಯಿಸಿದೆ. ಟ್ವಿನ್ ಸಿಲಿಂಡರ್ ಟ್ಯಾಂಕ್ ನಿಂದಾಗಿ ಹೆಚ್ಚಿನ ಮಟ್ಟದ ಲಗೇಜ್ ಇಡಬಹುದಾಗಿದ್ದು, ಜೊತೆಗೆ ಭರ್ಜರಿ ಮೈಲೇಜ್ ನೀಡಲಿದೆ.

6 / 8
1.2 ಲೀಟರ್ ಪೆಟ್ರೋಲ್ ಎಂಜಿನ್ ಜೊತೆ ಐ-ಸಿಎನ್​ಜಿ ಕಿಟ್ ಹೊಂದಿರುವ ಟಾಟಾ ಹೊಸ ಕಾರುಗಳು ಪ್ರತಿ ಕೆಜಿ ಸಿಎನ್ ಜಿ ಗೆ 26 ರಿಂದ 28 ಕಿ.ಮೀ ಮೈಲೇಜ್ ನೀಡಲಿವೆ. ಜೊತೆಗೆ ಹೊಸ ಕಾರುಗಳು ಪರ್ಫಾಮೆನ್ಸ್ ನಲ್ಲೂ ಗಮನಸೆಳೆಯಲಿದ್ದು, 73.5 ಹಾರ್ಸ್ ಪವರ್ ಮತ್ತು 95 ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿವೆ.

7 / 8
ಹೊಸ ಸಿಎನ್ ಜಿ ಕಾರುಗಳು ಪೆಟ್ರೋಲ್ ಮಾದರಿಗಿಂತಲೂ ರೂ. 70 ಸಾವಿರದಿಂದ ರೂ. 90 ಸಾವಿರದಷ್ಟು ದುಬಾರಿಯಾಗಿದ್ದು, ಇತ್ತೀಚೆಗೆ ಬಿಡುಗಡೆಯಾದ ಮಾರುತಿ ಸುಜುಕಿ ಹೊಸ ಸಿಎನ್​ಜಿ ಕಾರು ಮಾದರಿಗೆ ಇವು ಭರ್ಜರಿ ಪೈಪೋಟಿ ನೀಡಲಿವೆ.

8 / 8
Follow us
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ