ರಾಯಚೂರು: ಗದ್ದೆಯಲ್ಲಿ ವಿದ್ಯಾರ್ಥಿಗಳಿಗೆ ನಡೆಯಿತು ಕೃಷಿ ಪಾಠ
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಬೆಂಡೋಣಿ ಸರ್ಕಾರಿ ಶಾಲೆ ಈಗ ಮಾದರಿ ಪಾಠ ಶಾಲೆಯಾಗಿದೆ. ವಿದ್ಯಾರ್ಥಿಗಳನ್ನು ಗದ್ದೆಗೆ ಇಳಿಸಿ ನಾಟಿ ಮಾಡಿಸಲಾಗಿದೆ. ಈ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರು ಕೃಷಿಯ ಪಾಠ ಹೇಳಿಕೊಟ್ಟಿದ್ದಾರೆ. ಮಕ್ಕಳಿಗೆ ಕೃಷಿಯ ಮಹತ್ವದ ಬಗ್ಗೆ ಅರಿವು ಮೂಡಿಸುವುದಕ್ಕಾಗಿ ಕೃಷಿ ಪಾಠ ಮಾಡಿದ್ದಾರೆ. ಶಾಲೆಯಲ್ಲಿ ಪ್ರತಿ ಶನಿವಾರ ಬ್ಯಾಗ್ ರಹಿತ ದಿನ ಆಚರಣೆ ಮಾಡಲಾಗುತ್ತೆ. ಇದರ ಅಂಗವಾಗಿ ಈ ಬಾರಿ ಪರಿಸರದೆಡೆಗೆ ಮಕ್ಕಳ ಪಯಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.