ಮಕ್ಕಳನ್ನ ಶಾಲೆಗೆ ಸೆಳೆಯುವ ಉದ್ದೇಶದಿಂದ ಶಾಲೆಯ ಆವರಣವನ್ನ ಸ್ವಚ್ಚತೆ ಕಡೆಗೆ ಹೆಚ್ಚಿನ ಗಮನ ಕೊಡಲಾಗಿದೆ. ಶಾಲೆಯ ಆವರಣದಲ್ಲಿಯೇ ಕಿರು ಉದ್ಯಾನವ ನಿರ್ಮಿಸಿದ್ದಾರೆ, ಉತ್ತಮ ಪರಿಸರ ಪ್ರಜ್ಞೆ ಮೂಡಿಸಲು ನೂರಾರು ವಿವಿಧ ತರಹದ ಸಸಿಗಳನ್ನು ನೆಡಲಾಗಿದೆ. ಇಲ್ಲಿ ಗಿಡ, ಮರಗಳನ್ನು ಮಕ್ಕಳಂತೆ ಆರೈಕೆ ಮಾಡಲಾಗುತ್ತಿದ್ದು, ಆ ಗಿಡಗಳ ಬುಡದಲ್ಲೇ ಮಕ್ಕಳು ಓದಿಕೊಳ್ಳುವುದು, ಮಕ್ಕಳ ಆಟವು ಕೂಡ ಹಸಿರು ಗಿಡದ ನೆರಳಿನಲ್ಲಿಯೇ ನಡೆಯುವುದರಿಂದ ಮಕ್ಕಳ ಉತ್ಸಾಹಕ್ಕೆ ಪ್ರೋತ್ಸಾಹ ಸಿಗುವಂತಿದೆ.