Tech Tips: ಮೊಬೈಲ್ ಬ್ಯಾಟರಿ ಹಾಳಾಗದಂತೆ ಎಚ್ಚರಿಕೆ ವಹಿಸುವುದು ಹೇಗೆ?

Smartphone Battery Tips: ಬ್ಯಾಟರಿ ಫುಲ್​ ಚಾರ್ಜ್ ಮಾಡುವುದು ಎಷ್ಟು ತಪ್ಪೋ ಅದೇ ರೀತಿ ಬ್ಯಾಟರಿ ಲೋ ಆದಾಗಲೂ ಬ್ಯಾಟರಿ ಮೇಲೆ ಒತ್ತಡ ಬೀಳುತ್ತದೆ. ಹೀಗಾಗಿ ಮೊಬೈಲ್​ 20 ಪ್ರತಿಶತ ಚಾರ್ಜ್​ಗೆ ಬರುತ್ತಿದ್ದಂತೆಯೇ 80 ಪ್ರತಿಶತ ಚಾರ್ಜ್​ ಆಗುವವರೆಗೆ ಚಾರ್ಜ್ ಮಾಡಿ. ಹೀಗೆ ಮಾಡಿದರೆ ಬ್ಯಾಟರಿ ದೀರ್ಘ ಕಾಲದವರೆಗೆ ಬಾಳಿಕೆ ಬರುತ್ತದೆ.

Vinay Bhat
|

Updated on: Oct 20, 2023 | 6:55 AM

ಇಂದು 5000mAh ನಿಂದ ಹಿಡಿದು 7000mAh ವರೆಗಿನ ಬ್ಯಾಟರಿಯ ಸ್ಮಾರ್ಟ್​ಫೋನ್​ಗಳು ಮಾರುಕಟ್ಟೆಯಲ್ಲಿದೆ. ಇವು ದೀರ್ಘ ಸಮಯ ಚಾರ್ಜ್ ಬರುತ್ತದೆ. ಆದರೆ, ಈ ಬ್ಯಾಟರಿಯನ್ನು ಜೋಪಾನವಾಗಿ ಕಾಪಾಡಿಕೊಳ್ಳದಿದ್ದರೆ ಕೆಲವೇ ತಿಂಗಳುಗಳಲ್ಲಿ ಹಾಳಾಗುವ ಸಾಧ್ಯತೆ ಇರುತ್ತದೆ.

1 / 8
ಈಗ ಬಿಡುಗಡೆ ಆಗುವ ಹೆಚ್ಚಿನ ಸ್ಮಾರ್ಟ್​ಫೋನ್​ಗಳು ಫಾಸ್ಟ್ ಚಾರ್ಜರ್ ಟೆಕ್ನಾಲಜಿ ಹೊಂದಿರುತ್ತದೆ. ಇದರಿಂದ ಕೆಲವೇ ನಿಮಿಷಗಳಲ್ಲಿ ಬ್ಯಾಟರಿ ಫುಲ್ ಆಗುತ್ತದೆ ನಿಜ. ಆದರೆ, ಇದನ್ನು ಸರಿಯಾಗಿ ಉಪಚರಿಸಿಲ್ಲ ಎಂದಾದರೆ ಅಷ್ಟೇ ವೇಗವಾಗಿ ಬ್ಯಾಟರಿ ಕೆಟ್ಟ ಹೋಗುತ್ತದೆ. ಹಾಗಾದರೆ ಸ್ಮಾರ್ಟ್​ಫೋನ್ ಬ್ಯಾಟರಿ ದೀರ್ಘ ಕಾಲದವರೆಗೆ ಬಾಳಿಕೆ ಬರಲು ಏನು ಮಾಡಬೇಕು?.

2 / 8
ನಿಮ್ಮ ಮೊಬೈಲ್​​ನೊಂದಿಗೆ ನೀಡಿರುವ ಚಾರ್ಜರ್ ನಿಂದಲೇ ಫೋನ್ ಅನ್ನು ಚಾರ್ಜ್ ಮಾಡಿರಿ. ಸದ್ಯ ಎಲ್ಲ ಮೊಬೈಲ್​​ಗಳು ಯುಎಸ್‌ಬಿ ಕೇಬಲ್ ನಿಂದಲೇ ಚಾರ್ಜ್ ಆಗಲಿದೆ. ಹಾಗೆಂದು ಅದನ್ನು ಕಂಪ್ಯೂಟರ್​​ಗೆ ಹಾಕಿ ಇಲ್ಲವೇ ಬೇರೆ ಕಂಪನಿಗಳ ಚಾರ್ಜರ್ ಬಳಸಿ ಚಾರ್ಜ್ ಮಾಡಿದರೆ ಸಮಸ್ಯೆ ಎದುರಾಗುತ್ತದೆ. ಹಾಗಾಗಿ ಕಂಪನಿ ನೀಡಿರುವ ಚಾರ್ಜರ್ ನಿಂದಲೇ ಚಾರ್ಜ್ ಮಾಡಿ. ಆಗ ಬ್ಯಾಟರಿ ಕೂಡ ದೀರ್ಘ ಕಾಲದ ವರೆಗೆ ಬಾಳಿಕೆ ಬರುತ್ತದೆ.

3 / 8
ಮೊಬೈಲ್​ ಓವರ್​ಹೀಟ್​ ಮಾಡುವುದು ಕೂಡ ಬ್ಯಾಟರಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ರ್ಯಾಮ್ ಕಡಿಮೆ ಇದ್ದಾಗ ಅತಿಯಾಗಿ ಗೇಮ್​ ಆಡಿದರೆ ಮೊಬೈಲ್​ ಹೀಟ್​ ಆಗುತ್ತದೆ. ಕೂಡಲೇ ಗೇಮ್ ಆಡುವುದನ್ನು ನಿಲ್ಲಿಸಿ. ಮೊಬೈಲ್​ ಕೂಲ್​ ಆಗುವವರೆಗೂ ಬಳಕೆ ಮಾಡಬೇಡಿ.

4 / 8
ಕಾರು ಅಥವಾ ಬೈಕುಗಳಲ್ಲಿರುವ ಚಾರ್ಜರ್‌ಗಳ ಮೂಲಕವೂ ಫೋನ್ ಬ್ಯಾಟರಿ ರೀಚಾರ್ಜ್ ಮಾಡುವ ಅಭ್ಯಾಸವನ್ನು ಸಾಧ್ಯವಾದಷ್ಟು ತಪ್ಪಿಸಿ. ಯಾಕೆಂದರೆ, ಅದರಿಂದ ಬರುವ ಅಧಿಕ ಪ್ರಮಾಣದ ವಿದ್ಯುತ್ ಪ್ರವಾಹವು ಫೋನ್‌ನ ಬ್ಯಾಟರಿ ಮೇಲೆ ಪರಿಣಾಮ ಬೀರುತ್ತದೆ.

5 / 8
ಕೆಲವರು ಮೊಬೈಲ್ ಅನ್ನು ರಾತ್ರಿ ಇಡೀ ಚಾರ್ಜ್‌ಗೆ ಹಾಕಿ ಬಿಟ್ಟಿರುತ್ತಾರೆ. ಈ ರೀತಿ ಮಾಡುವುದು ಅಪಾಯಕಾರಿ. ಇದರಿಂದ ಬ್ಯಾಟರಿಯು ದೀರ್ಘಕಾಲ ಬಾಳಿಕೆ ಬರುವುದಿಲ್ಲ. ಅತಿಯಾಗಿ ಚಾರ್ಜ್ ಮಾಡುವುದೂ ಬೇಡ. ಶೇ 90 ರಷ್ಟು ಚಾರ್ಜ್ ಆದ ಕೂಡಲೇ ಚಾರ್ಜರ್ ಆಫ್ ಮಾಡಿ.

6 / 8
ಮಾರುಕಟ್ಟೆಯಲ್ಲಿ ವೈಫೈ, ಬ್ಲ್ಯೂಟೂತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವೈರ್ ಲೈಸ್ ಚಾರ್ಜರ್ ಲಭ್ಯವಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಇವುಗಳಿಂದ ದೂರವಿದ್ದರೆ ಮೊಬೈಲ್‌ ಬ್ಯಾಟರಿ ಆರೋಗ್ಯ ಚೆನ್ನಾಗಿರುತ್ತದೆ.

7 / 8
ಬ್ಯಾಟರಿ ಫುಲ್​ ಚಾರ್ಜ್ ಮಾಡುವುದು ಎಷ್ಟು ತಪ್ಪೋ ಅದೇ ರೀತಿ ಬ್ಯಾಟರಿ ಲೋ ಆದಾಗಲೂ ಬ್ಯಾಟರಿ ಮೇಲೆ ಒತ್ತಡ ಬೀಳುತ್ತದೆ. ಹೀಗಾಗಿ ಮೊಬೈಲ್​ 20 ಪ್ರತಿಶತ ಚಾರ್ಜ್​ಗೆ ಬರುತ್ತಿದ್ದಂತೆಯೇ 80 ಪ್ರತಿಶತ ಚಾರ್ಜ್​ ಆಗುವವರೆಗೆ ಚಾರ್ಜ್ ಮಾಡಿ. ಹೀಗೆ ಮಾಡಿದರೆ ಬ್ಯಾಟರಿ ದೀರ್ಘ ಕಾಲದವರೆಗೆ ಬಾಳಿಕೆ ಬರುತ್ತದೆ.

8 / 8
Follow us
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್