WhatsApp New Feature: ಒಂದೇ ವಾಟ್ಸ್​ಆ್ಯಪ್​ನಲ್ಲಿ 4-5 ಅಕೌಂಟ್: ಅರೇ, ಇದು ಹೇಗೆ ಸಾಧ್ಯ ಗೊತ್ತೇ?

WhatsApp New Switch Feature: ವಾಟ್ಸ್​ಆ್ಯಪ್​ನ ಈ ಹೊಸ ವೈಶಿಷ್ಟ್ಯದ ಮೂಲಕ ಒಂದು ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ. ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ.

|

Updated on: Oct 11, 2023 | 6:55 AM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ (WhatsApp) ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಒಂದರ ಹಿಂದೆ ಒಂದರಂತೆ ಆಕರ್ಷಕ ಫೀಚರ್​ಗಳನ್ನು ಬಿಡುಗಡೆ ಮಾಡುತ್ತಿದೆ. ಈಗಾಗಲೇ ಅನೇಕ ನೂತನ ಆಯ್ಕೆಗಳು ಪರೀಕ್ಷಾ ಹಂತದಲ್ಲಿದ್ದು, ಸದ್ಯದಲ್ಲೇ ಇದುಕೂಡ ಬಳಕೆದಾರರಿಗೆ ಸಿಗಲಿದೆ.

1 / 6
ಇದರ ನಡುವೆ ವಾಟ್ಸ್​ಆ್ಯಪ್ ಮತ್ತೊಂದು ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಇನ್ನುಂದೆ ನಿಮಗೆ ಈ ಹೊಸ ವೈಶಿಷ್ಟ್ಯದ ಮೂಲಕ ಒಂದೇ ವಾಟ್ಸ್​ಆ್ಯಪ್​ನಲ್ಲಿ ವಿಭಿನ್ನ ಖಾತೆಗಳನ್ನು ಬಳಸಬಹುದಾಗಿದೆ. ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ ಎಂದು ವರದಿ ಆಗಿದೆ.

2 / 6
ಸುಲಭವಾಗಿ ಹೇಳಬೇಕೆಂದರೆ, ಈ ಹೊಸ ವೈಶಿಷ್ಟ್ಯದ ಮೂಲಕ ಒಂದು ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ.

3 / 6
ಪ್ರಸ್ತುತ, ವಾಟ್ಸ್​ಆ್ಯಪ್​ ಬಳಕೆದಾರರಿಗೆ ಒಂದು ಮೊಬೈಲ್​ನಲ್ಲಿ ಒಂದು ಖಾತೆಯೊಂದಿಗೆ ಲಾಗ್ ಇನ್ ಮಾಡಲು ಮಾತ್ರ ಅನುಮತಿಸುತ್ತದೆ. ಆದ್ದರಿಂದ, ವಿಭಿನ್ನ ಫೋನ್ ಸಂಖ್ಯೆಗಳೊಂದಿಗೆ ಎರಡು ವಾಟ್ಸ್​ಆ್ಯಪ್​ ಖಾತೆಗಳನ್ನು ಬಳಸುವ ಬಳಕೆದಾರರು ಎರಡು ಮೊಬೈಲ್​ಗಳನ್ನು ಬಳಸಬೇಕಾಗುತ್ತದೆ.

4 / 6
ಈ ವೈಶಿಷ್ಟ್ಯವು ಪ್ರಸ್ತುತ ಕೆಲವು ಬೀಟಾ ಪರೀಕ್ಷಕರಿಗೆ ಲಭ್ಯವಿದೆ ಮತ್ತು ಮುಂಬರುವ ವಾರಗಳಲ್ಲಿ ಹೆಚ್ಚಿನ ಬಳಕೆದಾರರಿಗೆ ಹೊರತರಲಾಗುವುದು ಎಂದು ವರದಿಗಳು ಹೇಳಿದೆ. ಆಂಡ್ರಾಯ್ಡ್ ಆವೃತ್ತಿ 2.23.17.8 ಗಾಗಿ ವಾಟ್ಸ್​ಆ್ಯಪ್​ ಬೀಟಾವನ್ನು ಅಪ್‌ಡೇಟ್ ಮಾಡಿದರೆ ಈ ಆಯ್ಕೆ ಸಿಗಲಿದೆ. ಆದಾಗ್ಯೂ ಕೆಲವು ಬಳಕೆದಾರರಿಗೆ ಹಿಂದಿನ 2.23.17.7 ಆವೃತ್ತಿಯಲ್ಲಿ ಈ ವೈಶಿಷ್ಟ್ಯವನ್ನು ಉಪಯೋಗಿಸಲು ಸಾಧ್ಯವಾಗುತ್ತಿದೆ.

5 / 6
ಈ ವೈಶಿಷ್ಟ್ಯ ಬಳಸಲು, ಬಳಕೆದಾರರು QR ಕೋಡ್ ಬಟನ್ ಬಳಿ ಇರುವ ಬಾಣದ ಐಕಾನ್ ಅನ್ನು ಟ್ಯಾಪ್ ಮಾಡುವ ಮೂಲಕ ಹೊಸ ವಾಟ್ಸ್​ಆ್ಯಪ್​ ಖಾತೆಯನ್ನು ಸೇರಿಸಲು ಸಾಧ್ಯವಾಗುತ್ತದೆ. ಅದೇ ಮೆನುವಿನಲ್ಲಿ ಬೇರೆ ಖಾತೆಗೆ ಬದಲಾಯಿಸುವ ಆಯ್ಕೆ ಇದೆ. ಹೊಸದಾಗಿ ಸೇರಿಸಲಾದ ಖಾತೆಯನ್ನು ಲಾಗ್ ಔಟ್ ಮಾಡಲು ಆಯ್ಕೆ ಕೂಡ ನೀಡಲಾಗಿದೆ.

6 / 6
Follow us
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ

ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು

ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ

ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ

ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!

ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ

ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು

ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್

ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 

ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ