ನಿಮ್ಮ ಸ್ಮಾರ್ಟ್‌ಫೋನ್ ಕದ್ದರೆ ಮತ್ತು ಕಳ್ಳರು ಆ ಫೋನನ್ನು ಸ್ವಿಚ್ ಆಫ್ ಮಾಡಿದರೆ ಅನ್ನು ಹುಡುಕುವುದು ದೊಡ್ಡ ಕಷ್ಟ. ಆದರೆ ಮುಂಬರುವ ಗೂಗಲ್‌ನ ನವೀಕರಣ, ಆಂಡ್ರಾಯ್ಡ್ ಬಳಕೆದಾರರ ಫೋನ್ ಸ್ವಿಚ್ ಆಫ್ ಆಗಿದ್ದರೂ ಅವರ ಸ್ಮಾರ್ಟ್‌ಫೋನ್ ನಿಖರವಾದ ಸ್ಥಳವನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುತ್ತದೆ.
ಗೂಗಲ್ ಶೀಘ್ರದಲ್ಲೇ ತನ್ನ ಆಂಡ್ರಾಯ್ಡ್ 15 ಅಪ್ಡೇಟ್ ಅನ್ನು ತರಲಿದೆ. ಇದನ್ನು ಇನ್ಸ್ಟಾಲ್ ಮಾಡಿದ ನಂತರ ಆಂಡ್ರಾಯ್ಡ್ ಬಳಕೆದಾರರು ಸ್ವಿಚ್ ಆಫ್ ಮಾಡಿದ ನಂತರವೂ ತಮ್ಮ ಫೋನ್ ಅನ್ನು ಸುಲಭವಾಗಿ ಹುಡುಕಲು ಸಾಧ್ಯವಾಗುತ್ತದೆ. ಇಲ್ಲಿಯವರೆಗೆ ಈ ವೈಶಿಷ್ಟ್ಯವು ಆಂಡ್ರಾಯ್ಡ್ ಫೋನ್‌ಗಳಲ್ಲಿ ಲಭ್ಯವಿರಲಿಲ್ಲ.
ಗೂಗಲ್ ಕಂಪನಿಯು ಆಂಡ್ರಾಯ್ಡ್ 15 ಸಿಸ್ಟಮ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ, ಇದು ಗೂಗಲ್‌ನ ಮುಂಬರುವ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ಆಗಿದೆ. ಆಂಡ್ರಾಯ್ಡ್ 15 ಓಎಸ್‌ನಲ್ಲಿ ಸ್ಮಾರ್ಟ್‌ಫೋನ್ ಬಳಕೆದಾರರಿಗೆ ಗೂಗಲ್ ಉತ್ತಮ ವೈಶಿಷ್ಟ್ಯವನ್ನು ನೀಡಲಿದೆ. ಇದರಲ್ಲಿ ಬಳಕೆದಾರರಿಗೆ ಫೋನ್ ಸ್ವಿಚ್ ಆಫ್ ಆಗಿದ್ದರೂ ಅದನ್ನು ಪತ್ತೆ ಮಾಡುವ ಆಯ್ಕೆ ಕೂಡ ಒಂದು.
ಗೂಗಲ್‌ನ ಮುಂಬರುವ OS ಆಂಡ್ರಾಯ್ಡ್ 15 ನಲ್ಲಿ ಪಾಸ್‌ವರ್ಡ್ ಮೂಲಕ ಹುಡುಕುವ ವೈಶಿಷ್ಟ್ಯವು ಲಭ್ಯವಿರುತ್ತದೆ. ಈ ಹೊಸ ವ್ಯವಸ್ಥೆಯು ಪೂರ್ವ ಕಂಪ್ಯೂಟೆಡ್ ಬ್ಲೂಟೂತ್ ಬೀಕನ್ ಆಗಿರುತ್ತದೆ. ಇದು ಸಾಧನದ ಮೆಮೊರಿಯಿಂದ ನಿಯಂತ್ರಿಸಲ್ಪಡುತ್ತದಂತೆ. ಇದಕ್ಕಾಗಿ ಫೋನ್ನ ಹಾರ್ಡ್‌ವೇರ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ.
ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಆಂಡ್ರಾಯ್ಡ್ ತಜ್ಞ ಮಿಶಾಲ್ ರೆಹಮಾನ್ ಈ ಬಗ್ಗೆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಪಿಕ್ಸೆಲ್ 8 ಮತ್ತು ಪಿಕ್ಸೆಲ್ 8 ಪ್ರೊ ಜೊತೆಗೆ ಗೂಗಲ್‌ನ ಮುಂಬರುವ ಸ್ಮಾರ್ಟ್‌ಫೋನ್‌ಗಳಲ್ಲಿ ಈ ವೈಶಿಷ್ಟ್ಯವನ್ನು ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ. ಪ್ರಸ್ತುತ ಆಂಡ್ರಾಯ್ಡ್ 15 ಓಎಸ್ ಬಿಡುಗಡೆಗೆ ಯಾವುದೇ ನಿಖರವಾದ ದಿನಾಂಕವನ್ನು ಗೂಗಲ್ ಬಹಿರಂಗಪಡಿಸಿಲ್ಲ.
Published On - 11:51 am, Mon, 20 May 24