ತೇಜಸ್ವಿ ಸೂರ್ಯ ಮದುವೆ: ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಜತೆ ದಾಂಪತ್ಯಕ್ಕೆ ಕಾಲಿಟ್ಟ ಸೂರ್ಯ, ಇಲ್ಲಿವೆ ಫೊಟೋಸ್

Updated on: Mar 06, 2025 | 12:55 PM

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಜನಪ್ರಿಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವಿವಾಹ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್​ನಲ್ಲಿ ನೆರವೇರಿತು. ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ನಡೆಯಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ವಿ ಸೋಮಣ್ಣ ಸೇರಿದಂತೆ ಅನೇಕ ಬಿಜೆಪಿ ನಾಯಕರು ವಿವಾಹ ಸಮಾರಂಭಕ್ಕೆ ಹಾಜರಾಗಿ ವಧೂವರರಿಗೆ ಶುಭ ಹಾರೈಸಿದರು.

1 / 5
ಶಿವಶ್ರೀ ಸ್ಕಂದಪ್ರಸಾದ್ ಮತ್ತು ತೇಜಸ್ವಿ ಸೂರ್ಯ ಸರಳ ಮತ್ತು ಸಾಂಪ್ರದಾಯಿಕ ಉಡುಪುಗಳಲ್ಲಿ ಕಾಣಿಸಿಕೊಂಡು ಗಮನ ಸೆಳೆದರು. ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಭವ್ಯವಾದ ಆರತಕ್ಷತೆ ನಡೆಯಲಿದೆ ಎಂದು ತೇಜಸ್ವಿ ಸೂರ್ಯ ಕುಟುಂಬದ ಮೂಲಗಳು ತಿಳಿಸಿವೆ.

2 / 5
ಶಿವಶ್ರೀ ಸ್ಕಂದಪ್ರಸಾದ್ ಪ್ರಸಿದ್ಧ ಕರ್ನಾಟಕ ಸಂಗೀತ ಗಾಯಕಿ ಮತ್ತು ಚೆನ್ನೈನ ಭರತನಾಟ್ಯಂ ಕಲಾವಿದೆ. 1996 ರ ಆಗಸ್ಟ್ 1 ರಂದು ಜನಿಸಿದ ಅವರು, ಮೃದಂಗ ಕಲಾವಿದ ಸೀರ್ಕಾಳಿ ಶ್ರೀ ಜೆ ಸ್ಕಂದಪ್ರಸಾದ್ ಅವರ ಪುತ್ರಿ.

3 / 5
ಅವರು SASTRA ವಿಶ್ವವಿದ್ಯಾಲಯದಿಂದ ಬಯೋ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಭ್ರೂಣದ ದೋಷಗಳ ಬಗ್ಗೆಯೂ ಅಧ್ಯಯನ ಮಾಡಿದ್ದಾರೆ. ಅಲ್ಲದೆ, PVA ಆಯುರ್ವೇದ ಆಸ್ಪತ್ರೆಯಿಂದ ಆಯುರ್ವೇದ ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ ಪಡೆದಿದ್ದಾರೆ. ಅವರು ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಸಹ ಪಡೆದಿದ್ದಾರೆ.

4 / 5
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಗಣ್ಯರು ವಿವಾಹ ಸಮಾರಂಭಕ್ಕೆ ಸಾಕ್ಷಿಯಾದರು.

5 / 5
ತೇಜಸ್ವಿ ಸೂರ್ಯ ಅವರ ಬೆಂಗಳೂರಿನ ಗಿರಿನಗರದಲ್ಲಿರುವ ನಿವಾಸದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ನಂತರ ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಆರತಕ್ಷತೆ ನಡೆಯಲಿದೆ.