Kannada News Photo gallery Telangana Politics CM K Chandrashekar Rao performs rajashyamala shatachandi yaga at his farmhouse
ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ರಿಂದ ರಾಜಶ್ಯಾಮಲ ಯಾಗ: ಪುನರಾವರ್ತನೆಯಾಗಲಿದೆಯಾ 2018ರ ಫಲಿತಾಂಶ?
ಬಿಆರ್ಎಸ್ ಮುಖ್ಯಸ್ಥ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಆರಂಭದಿಂದಲೂ ಆಳವಾದ ಧಾರ್ಮಿಕ ನಂಬಿಕೆಯನ್ನು ಹೊಂದಿದ್ದಾರೆ. ಅದಕ್ಕಾಗಿಯೇ ಅವರು ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಾರೆ. ಕಾಲಕಾಲಕ್ಕೆ ಯಾಗಗಳನ್ನೂ ನಡೆಸುತ್ತಾರೆ. 2015ರಲ್ಲಿ ರಾಜ್ಯ ಅಭಿವೃದ್ಧಿ ಹೊಂದಿ, ಸಮಸ್ತ ಜನತೆ ಸುಭಿಕ್ಷವಾಗಿರಲಿ ಎಂಬ ಉದ್ದೇಶದಿಂದ ಚಂಡಿ ಯಾಗ ನೆರವೇರಿಸಿದ್ದರು. ಆ ಬಳಿಕ 2018ರಲ್ಲಿ ಎರಡನೇ ಬಾರಿಗೆ, ಚುನಾವಣೆಗೆ ಹೋಗುವ ಮುನ್ನವೇ ಸಿಎಂ ಕೆಸಿಆರ್ ತಮ್ಮ ತೋಟದ ಮನೆಯಲ್ಲಿ ರಾಜಶ್ಯಾಮಲ ಯಾಗ ನಡೆಸಿದ್ದರು. ಆ ನಂತರ ಚುನಾವಣೆ ಎದುರಿಸಿದ ಕೆಸಿಆರ್ ಮತ್ತೆ ಅಧಿಕಾರದ ಗದ್ದುಗೆ ಹಿಡಿದರು.