AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India strikes Pakistan: ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ

ನವದೆಹಲಿ, ಮೇ 7: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಒಟ್ಟು 9 ಪ್ರದೇಶಗಳಲ್ಲಿ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಭಾರತದ ಮೇಲಿನ ಅನೇಕ ದಾಳಿಗಳ ಹಿಂದೆ ಇದ್ದ ಈ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. 4 ಜೈಶ್-ಎ-ಮೊಹಮ್ಮದ್, 3 ಲಷ್ಕರ್-ಎ-ತೈಬಾ ಮತ್ತು 2 ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಗಣಪತಿ ಶರ್ಮಾ
|

Updated on: May 07, 2025 | 9:24 AM

Share
ಭಾರತ ಗುರಿಯಾಗಿಸಿಕೊಂಡಿರುವ ಭಯೋತ್ಪಾದಕ ಅಡಗುತಾಣಗಳಲ್ಲಿ ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿಯೂ ಸೇರಿದೆ. ಇದಲ್ಲದೆ, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಶಿಬಿರಗಳನ್ನು ಸಹ ನಾಶಪಡಿಸಲಾಗಿದೆ. ಅಂತಾರಾಷ್ಟ್ರೀಯ ಗಡಿಯಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಮತ್ತು ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿ ಇರುವ ಬಹವಾಲ್‌ಪುರದಲ್ಲಿ ಅತಿದೊಡ್ಡ ದಾಳಿ ನಡೆಸಲಾಯಿತು.

1 / 5
ಭಾರತದ ಆಪರೇಷನ್ ಸಿಂಧೂರ್ ನಂತರ, ಪಾಕಿಸ್ತಾನವು ಆಕ್ರೋಶಗೊಂಡಿದ್ದು ದುಷ್ಟ ಚಟುವಟಿಕೆಗಳನ್ನು ಮುಂದುವರೆಸಿದೆ. ಪಾಕಿಸ್ತಾನ ಸೇನೆಯು ಸಾಮಾನ್ಯ ಭಾರತೀಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಾದ್ಯಂತ ಗುಂಡಿನ ದಾಳಿ ನಡೆಸಿದ್ದು, 3 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

2 / 5
ಸಾಂಬಾ ಸೆಕ್ಟರ್ ಗಡಿಯಿಂದ 30 ಕಿ.ಮೀ ದೂರದಲ್ಲಿರುವ ಮುರಿಡ್ಕೆ ಎಂಬ ಸ್ಥಳದಲ್ಲಿ ಲಷ್ಕರ್-ಎ-ತಯ್ಬಾ ಶಿಬಿರವಿತ್ತು . ಅದೂ ಕೂಡ ದಾಳಿಯಲ್ಲಿ ಧ್ವಂಸಗೊಂಡಿದೆ. ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ ದಾಳಿಯ ಭಯೋತ್ಪಾದಕರು ಇಲ್ಲಿಂದಲೇ ಬಂದವರು ಎನ್ನಲಾಗಿದೆ.

3 / 5
ಮೂರನೇ ದಾಳಿ ಗುಲ್ಪುರದಲ್ಲಿ ನಡೆಸಲಾಯಿತು. ಇದು ಪೂಂಚ್-ರಾಜೌರಿಯ ಎಲ್‌ಒಸಿಯ ಒಳಗೆ ಸುಮಾರು 35 ಕಿ.ಮೀ ದೂರದಲ್ಲಿದೆ. 2023 ರ ಏಪ್ರಿಲ್ 20 ರಂದು ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಮತ್ತು 2024 ರ ಜೂನ್​​ನಲ್ಲಿ ಪ್ರಯಾಣಿಕರಿಂದ ತುಂಬಿದ್ದ ಬಸ್ ಮೇಲೆ ನಡೆದ ದಾಳಿಗೆ ಈ ಪ್ರದೇಶಗಳಿಂದಲೇ ಸಂಚು ಹೂಡಲಾಗಿತ್ತು ಮತ್ತು ಉಗ್ರರನ್ನು ಕಳುಹಿಸಲಾಗಿತ್ತು.

4 / 5
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಫರಾಬಾದ್ ಬಳಿ ಭಾರತೀಯ ಸೇನೆಯ ಕ್ಷಿಪಣಿ ದಾಳಿಯಿಂದ ಹಾನಿಗೊಳಗಾದ ಕಟ್ಟಡವನ್ನು ಪಾಕಿಸ್ತಾನ ಸೇನಾ ಸೈನಿಕರು ಪರಿಶೀಲಿಸಿದರು. ಪಿಒಕೆ ವ್ಯಾಪ್ತಿಯ ಸುಮಾರು 5 ಉಗ್ರರ ತಾಣಗಳ ಮೇಲೆ ಭಾರತ ದಾಳಿ ನಡೆಸಿದೆ.

5 / 5
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್

ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ

ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ

ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್

‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ

ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್

ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು

ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ

ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ