- Kannada News Photo gallery Thalapathy Vijay starter Varisu movie trailer creates huge buzz on YouTube
Thalapathy Vijay: ‘ವಾರಿಸು’ ಟ್ರೇಲರ್‌ಗೆ ಸಖತ್ ಪ್ರತಿಕ್ರಿಯೆ; ಗೆಲುವಿನ ನಿರೀಕ್ಷೆಯಲ್ಲಿ ದಳಪತಿ ವಿಜಯ್
Varisu Movie Trailer | Thalapathy Vijay: ಜನವರಿ 12ರಂದು ‘ವಾರಿಸು’ ಚಿತ್ರ ಬಿಡುಗಡೆ ಆಗಲಿದೆ. ಈ ಚಿತ್ರವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ದಳಪತಿ ವಿಜಯ್ ಫ್ಯಾನ್ಸ್ ಕಾದಿದ್ದಾರೆ.
Updated on: Jan 05, 2023 | 8:00 AM

ಬಹುನಿರೀಕ್ಷಿತ ‘ವಾರಿಸು’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಕೋಟಿಗಟ್ಟಲೆ ವೀಕ್ಷಣೆ ಕಂಡಿದೆ. ಈ ಮೂಲಕ ಸಿನಿಮಾ ಮೇಲಿನ ಹೈಪ್ ಹೆಚ್ಚಾಗಿದೆ.

‘ವಾರಿಸು’ ಸಿನಿಮಾದಲ್ಲಿ ದಳಪತಿ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರದಿಂದ ರಶ್ಮಿಕಾ ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್ ಸಿಗುವ ನಿರೀಕ್ಷೆ ಇದೆ.

ವಂಶಿ ಪೈಡಿಪಲ್ಲಿ ಅವರು ‘ವಾರಿಸು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎಂಬುದು ಟ್ರೇಲರ್ ಮೂಲಕ ಗೊತ್ತಾಗಿದೆ. ಟ್ರೇಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜನವರಿ 12ರಂದು ‘ವಾರಿಸು’ ಚಿತ್ರ ಬಿಡುಗಡೆ ಆಗಲಿದೆ. ಈ ಚಿತ್ರವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ದಳಪತಿ ವಿಜಯ್ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಗಲಿದೆ.

ಕಳೆದ ವರ್ಷ ದಳಪತಿ ವಿಜಯ್ ನಟನೆಯ ‘ಬೀಸ್ಟ್' ಸಿನಿಮಾ ತೆರೆಕಂಡಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಮಾಡಿರಲಿಲ್ಲ. ಹಾಗಾಗಿ ‘ವಾರಿಸು' ಚಿತ್ರದಿಂದ ಅವರು ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.




