ಶಿವಮೊಗ್ಗದಲ್ಲಿ ಏರ್​ಪೋರ್ಟ್ ಆಗಬೇಕೆಂದು ಬಹಳ ವರ್ಷಗಳ ಕನಸಿತ್ತು, ಕನಸು ಇಂದು ನನಸಾಗಿದೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

|

Updated on: Aug 31, 2023 | 3:15 PM

ಶಿವಮೊಗ್ಗ ವಿಮಾನ ನಿಲ್ದಾಣ ಮಲೆನಾಡಿನ ಏಕೈಕ ಏರ್‌ಪೋರ್ಟ್‌ ಆಗಿದ್ದು, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಕರಾವಳಿ ಭಾಗಕ್ಕೂ ಅನುಕೂಲವಾಗಲಿದೆ.ಆ.11ರಿಂದ ಆರಂಭವಾಗಬೇಕಿದ್ದ ವಿಮಾನಯಾನ ಸೇವೆಯು ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿತ್ತು.

1 / 6
ಬೆಂಗಳೂರು ನಂತರ ಅತಿ ಉದ್ದದ ರನ್ ವೇ ಹೊಂದಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದ (ಆಗಸ್ಟ್ 31) ವಿಮಾನ ಹಾರಾಟ ಶುರುವಾಗಿದೆ. ಬೆಂಗಳೂರಿನಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಬಂದಿಳಿದಿದ್ದು, ಮಲೆನಾಡಿಗರ ಕನಸು ನೆರವೇರಿದೆ.

2 / 6
ಬೆಳಗ್ಗೆ 9.55ಕ್ಕೆ ಬೆಂಗಳೂರಿನಿಂದ ಹೊರಟ್ಟಿದ್ದ ಮೊದಲ ವಿಮಾನ ಬೆಳಗ್ಗೆ 11.05 ಕ್ಕೆ ಶಿವಮೊಗ್ಗದಲ್ಲಿ ಲ್ಯಾಂಡ್​ ಆಗಿದೆ.ಇನ್ನು ಈ ಮೊದಲ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರಯಾಣಿಸಿದ್ದರು.

3 / 6
ಕಳೆದ ಫೆಬ್ರವರಿ.27ರಂದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಜನ್ಮದಿನದಂದೇ ಸುಮಾರು 450 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗದ ಸೋಗಾನೆ ಬಳಿ‌ ಇರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು  ಲೋಕಾರ್ಪಣೆಗೊಳಿಸಿದ್ದರು.

4 / 6
ಮಲೆನಾಡಿನ ಏಕೈಕ ಏರ್‌ಪೋರ್ಟ್‌ ಇದಾಗಿದ್ದು, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಕರಾವಳಿ ಭಾಗಕ್ಕೂ ಅನುಕೂಲವಾಗಲಿದೆ.ಆ.11ರಿಂದ ಆರಂಭವಾಗಬೇಕಿದ್ದ ವಿಮಾನಯಾನ ಸೇವೆಯು ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿತ್ತು.

5 / 6
ಶಿವಮೊಗ್ಗದಲ್ಲಿ ಏರ್​ಪೋರ್ಟ್ ಆಗಬೇಕೆಂದು ಬಹಳ ವರ್ಷಗಳ ಕನಸಿತ್ತು. ನಿಮ್ಮೆಲ್ಲರ ಆಶೀರ್ವಾದ, ಬೆಂಬಲ, ಪ್ರಧಾನಿ ವಿಶೇಷ ಆಸಕ್ತಿಯಿಂದ ಕನಸು ನನಸಾಗಿದೆ. ಕೆಲವೇ ವರ್ಷಗಳಲ್ಲಿ ಇದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿ ಮಾಧ್ಯಮಗಳಿಗೆ ತಿಳಿಸಿದರು.

6 / 6
ಶಿವಮೊಗ್ಗ ಏರ್​​ಪೋರ್ಟ್​​​ ನಿರ್ಮಾಣಕ್ಕೆ ಯಾವುದೇ ತಕರಾರು ಇಲ್ಲದೆ ಸುಗಮವಾಗಿ  ನಡೆಯಲು ಪ್ರಮುಖ ಕಾರಣ ಅಲ್ಲಿನ ರೈತ ಕುಟುಂಬ. ಹಾಗಾಗಿ ಎಲ್ಲಾ ಗೌರವ ಆ ಭಾಗದ ರೈತರಿಗೆ ಸಲ್ಲಬೇಕು. ಸಹಕಾರ ಕೊಟ್ಟ ರೈತರಿಗೆ  ಧನ್ಯವಾದ ತಿಳಿಸುತ್ತೇನೆ ಎಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Published On - 3:13 pm, Thu, 31 August 23