AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾ ಭೇಟಿ ಮಾಡಿದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಂಡ; ಇಲ್ಲಿವೆ ಫೋಟೋಗಳು

ಭಾರಿ ಸಂಚಲನ ಸೃಷ್ಟಿ ಮಾಡಿರುವ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಂಡದವರು ಈಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಭೇಟಿ ಆಗಿದ್ದಾರೆ. ಆ ಕ್ಷಣದ ಫೋಟೋಗಳನ್ನು ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Mar 18, 2022 | 3:43 PM

Share
ಕೆಲವೇ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಂಡ ಭೇಟಿ ಆಗಿತ್ತು. ಈಗ ಗೃಹ ಸಚಿವ ಅಮಿತ್​ ಶಾ ಅವರನ್ನು ಕೂಡ ಭೇಟಿ ಮಾಡಲಾಗಿದೆ. ಈ ವೇಳೆ ಚಿತ್ರತಂಡದವರ ಜೊತೆ ಅನೇಕ ವಿಚಾರಗಳನ್ನು ಅಮಿತ್​ ಶಾ ಚರ್ಚೆ ಮಾಡಿದರು ಎನ್ನಲಾಗಿದೆ.

The Kashmir Files director Vivek Agnihotri meets home minister Amit Shah mdn

1 / 6
ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಕಥೆಯನ್ನು ತೋರಿಸಿದ್ದಾರೆ. ಅವರಿಗೆ ಅನೇಕರಿಂದ ಮೆಚ್ಚುಗೆ ಕೇಳಿಬಂದಿದೆ. ರಾಜಕೀಯ ಕ್ಷೇತ್ರದ ಹಲವು ಗಣ್ಯರು ಈ ಸಿನಿಮಾ ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

The Kashmir Files director Vivek Agnihotri meets home minister Amit Shah mdn

2 / 6
ಅಮಿತ್​ ಶಾ ಅವರನ್ನು ಭೇಟಿ ಆದಾಗ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಜೊತೆಗೆ ಅವರ ಪತ್ನಿ ಪಲ್ಲವಿ ಜೋಶಿ, ಹಿರಿಯ ನಟ ಅನುಪಮ್​ ಖೇರ್​ ಕೂಡ ಇದ್ದರು. ಇವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ಗಮನಾರ್ಹ ಪಾತ್ರಗಳನ್ನು ಮಾಡಿದ್ದಾರೆ. ಅವರ ನಟನೆಗೆ ಮೆಚ್ಚುಗೆ ವ್ಯಕ್ತವಾಗಿದೆ.

3 / 6
‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಹೊಸ ಸಂಚಲನವನ್ನೇ ಸೃಷ್ಟಿ ಮಾಡಿದೆ. ವಿವಾದಗಳ ಕಾರಣದಿಂದಲೂ ಈ ಸಿನಿಮಾ ಸದ್ದು ಮಾಡುತ್ತಿದೆ. ಆ ಕಾರಣದಿಂದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರಿಗೆ ವೈ ಕೆಟಗರಿ ಭದ್ರತೆಯನ್ನು ನೀಡಲಾಗಿದೆ.

4 / 6
ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ನೋಡಿದ್ದಾರೆ. ಅನೇಕ ರಾಜ್ಯಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಈ ಬಗ್ಗೆ ಪರ-ವಿರೋಧದ ಚರ್ಚೆ ಚಾಲ್ತಿಯಲ್ಲಿದೆ.

5 / 6
ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಧೂಳೆಬ್ಬಿಸಿದೆ. ಮಾ.11ರಂದು ರಿಲೀಸ್​ ಆಗಿದ್ದ ಈ ಚಿತ್ರ ಮೊದಲ ದಿನ ಕೇವಲ 3.55 ಕೋಟಿ ರೂಪಾಯಿ ಗಳಿಸಿತ್ತು. ಆದರೆ ಒಂದು ವಾರ ಕಳೆಯುವುದರೊಳಗೆ ವಿದೇಶಿ ಗಳಿಕೆಯನ್ನೂ ಸೇರಿಸಿ 100 ಕೋಟಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ