4 ತಪ್ಪು ಕಲ್ಪನೆಗಳನ್ನು ಅಳಿಸಿಹಾಕಿದೆ ‘ದಿ ಕಾಶ್ಮೀರ್ ಫೈಲ್ಸ್’; ಪರಿಪರಿಯಾಗಿ ವಿಶ್ಲೇಷಣೆ ಮಾಡಿದ ಆರ್ಜಿವಿ
TV9 Web | Updated By: ರಾಜೇಶ್ ದುಗ್ಗುಮನೆ
Updated on:
Mar 22, 2022 | 6:56 AM
The Kashmir Files: ಅನುಭವಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ನೋಡಿ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈ ಚಿತ್ರದ ಕುರಿತು ಕೆಲವು ವಿಷಯಗಳನ್ನು ಅವರು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.
1 / 5
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಗ್ಗೆ ಕೆಲವು ಸೆಲೆಬ್ರಿಟಿಗಳು ಮೌನ ತಾಳಿದ್ದಾರೆ. ಹಲವರು ಮನಸಾರೆ ಮಾತನಾಡುತ್ತಿದ್ದಾರೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಈ ಚಿತ್ರ ಸಖತ್ ಇಷ್ಟ ಆಗಿದೆ. ತಮ್ಮದೇ ಶೈಲಿಯಲ್ಲಿ ಅವರು ಸಿನಿಮಾ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ. 4 ತಪ್ಪು ಕಲ್ಪನೆಗಳನ್ನು ಈ ಚಿತ್ರ ಅಳಿಸಿ ಹಾಕಿದೆ ಎಂದು ಅವರು ಹೇಳಿದ್ದಾರೆ.
2 / 5
ಮೊದಲ ತಪ್ಪು ಕಲ್ಪನೆ: ದೊಡ್ಡ ಸ್ಟಾರ್ ನಟರು ಮಾತ್ರ ಜನರನ್ನು ಚಿತ್ರಮಂದಿರಕ್ಕೆ ಕರೆಸಲು ಸಾಧ್ಯ. ಈ ಮಾತನ್ನು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಸುಳ್ಳು ಮಾಡಿದೆ. ಸ್ಟಾರ್ ಹೀರೋಗಳು ಇಲ್ಲದೇ ಇದ್ದರೂ ಕೂಡ ಜನರು ಈ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಅದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
3 / 5
ಎರಡನೇ ತಪ್ಪು ಕಲ್ಪನೆ: ದೊಡ್ಡ ಬಜೆಟ್ನ ಸಿನಿಮಾಗಳನ್ನು ನೋಡಲು ಮಾತ್ರ ಜನರು ಚಿತ್ರಮಂದಿರಕ್ಕೆ ಬರುತ್ತಾರೆ. ಈ ಮಾತು ಕೂಡ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಸುಳ್ಳು ಎಂಬುದು ಸಾಬೀತಾಗಿದೆ. ಕಡಿಮೆ ಬಜೆಟ್ನಲ್ಲಿ ತಯಾರಾದ ಈ ಸಿನಿಮಾ ಇಂದು 200 ಕೋಟಿ ರೂ. ಕಲೆಕ್ಷನ್ ಮಾಡುವಷ್ಟು ಗೆಲುವು ಪಡೆದುಕೊಂಡಿದೆ.
4 / 5
5 / 5
Published On - 6:30 am, Tue, 22 March 22