Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ

Updated on: May 05, 2023 | 4:42 PM

The Kerala Story: ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿದ ಎಲ್ಲರೂ ಅದಾ ಶರ್ಮಾ ಅವರ ನಟನೆ ಬಗ್ಗೆ ಮಾತನಾಡುತ್ತಿದ್ದಾರೆ. ಮತಾಂತರವಾದ ಹಿಂದೂ ಹುಡುಗಿಯ ಪಾತ್ರದಲ್ಲಿ ಅವರು ಅಭಿನಯಿಸಿದ್ದಾರೆ.

1 / 5
ನಟಿ ಅದಾ ಶರ್ಮಾ ಅವರು ಈವರೆಗೆ ಕಲರ್​ಫುಲ್​ ಆದಂತಹ ಪಾತ್ರಗಳನ್ನೇ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಆದರೆ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಅವರು ಒಂದು ಭಿನ್ನವಾದ ಪಾತ್ರ ಮಾಡಿದ್ದಾರೆ. ಆ ಮೂಲಕ ಸುದ್ದಿ ಆಗುತ್ತಿದ್ದಾರೆ.

ನಟಿ ಅದಾ ಶರ್ಮಾ ಅವರು ಈವರೆಗೆ ಕಲರ್​ಫುಲ್​ ಆದಂತಹ ಪಾತ್ರಗಳನ್ನೇ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಆದರೆ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಅವರು ಒಂದು ಭಿನ್ನವಾದ ಪಾತ್ರ ಮಾಡಿದ್ದಾರೆ. ಆ ಮೂಲಕ ಸುದ್ದಿ ಆಗುತ್ತಿದ್ದಾರೆ.

2 / 5

ಶಾಲಿನಿ ಉನ್ನಿಕೃಷ್ಣನ್​ ಅಲಿಯಾಸ್​ ಫಾತಿಮಾ ಎಂಬ ಪಾತ್ರದಲ್ಲಿ ಅದಾ ಶರ್ಮಾ ಅವರು ನಟಿಸಿದ್ದಾರೆ. ಹಲವು ಶೇಡ್​ಗಳನ್ನು ಹೊಂದಿರುವ ಈ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ. ನೋಡುಗರಿಂದ ಅವರಿಗೆ ಮೆಚ್ಚುಗೆ ಸಿಕ್ಕಿದೆ.

3 / 5

ಸುದೀಪ್ತೋ ಸೇನ್​ ಅವರು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಮೇ 5ರಂದು ಬಿಡುಗಡೆ ಆಗಿರುವ ಈ ಸಿನಿಮಾದಲ್ಲಿ ಐಸಿಸ್​ ಪ್ರೇರಿತ ಮತಾಂತರದ ಬಗ್ಗೆ ವಿವರಿಸಲಾಗಿದೆ. ದೇಶಾದ್ಯಂತ ಈ ಸಿನಿಮಾ ಬಿಡುಗಡೆಯಾಗಿ ಚರ್ಚೆ ಹುಟ್ಟುಹಾಕಿದೆ.

4 / 5

ನೈಜ ಘಟನೆಗಳನ್ನು ಆಧರಿಸಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರದಲ್ಲಿನ ಕೆಲವು ದೃಶ್ಯಗಳು ವಿವಾದಕ್ಕೆ ಕಾರಣ ಆಗಿವೆ. ವಿಮರ್ಶಕರ ವಲಯದಲ್ಲಿ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

5 / 5

ಬಿಡುಗಡೆಗೂ ಮುನ್ನವೇ ‘ದಿ ಕೇರಳ ಸ್ಟೋರಿ’ ಸಿನಿಮಾ ವಿವಾದಕ್ಕೆ ಕಾರಣ ಆಗಿತ್ತು. ‘ಕೇವಲ ಟ್ರೇಲರ್​ ನೋಡಿ ಮಾತನಾಡುವುದು ಸರಿಯಲ್ಲ, ಪೂರ್ತಿ ಸಿನಿಮಾ ನೋಡಿದ ಬಳಿಕ ಅಭಿಪ್ರಾಯ ತಿಳಿಸಿ’ ಎಂದು ಅದಾ ಶರ್ಮಾ ಹೇಳಿದ್ದರು.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us