ಭಾರತದ ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಧೂಳೆಬ್ಬಿಸಿದೆ. ಬರೋಬ್ಬರಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುಗ್ಗುತ್ತಿದೆ. ಈಗ ವಿದೇಶದಲ್ಲೂ ತನ್ನ ಆರ್ಭಟ ಶುರುಮಾಡಿದೆ.
ಅಮೆರಿಕಾ, ಆಸ್ಟ್ರೇಲಿಯಾ ಮುಂತಾದ ಕಡೆಗಳಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆಗಿದೆ. ಅಲ್ಲಿಯೂ ಕೂಡ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಇದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ.
ಈ ಸಿನಿಮಾಗೆ ಸುದೀಪ್ತೋ ಸೇನ್ ಅವರು ನಿರ್ದೇಶನ ಮಾಡಿದ್ದಾರೆ. ವಿದೇಶದಲ್ಲಿ ಸಿನಿಮಾ ಬಿಡುಗಡೆ ಆಗಿರುವುದರಿಂದ ಹೆಚ್ಚಿನ ಜನರನ್ನು ತಲುಪಲು ಸಹಕಾರಿ ಆಗಿದೆ. ಚಿತ್ರದ ಟೋಟಲ್ ಕಲೆಕ್ಷನ್ ಹೆಚ್ಚುತ್ತಿದೆ.
ಆಸ್ಟ್ರೇಲಿಯಾದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಅಲ್ಲಿ 2 ದಿನಗಳ ಕಾಲ ಪ್ರದರ್ಶನ ಕಂಡಿರುವ ಈ ಚಿತ್ರ 46 ಲಕ್ಷ ರೂಪಾಯಿ ಕಮಾಯಿ ಮಾಡಿದೆ ಎಂಬುದು ವಿಶೇಷ.
ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಿಂದ ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್ ಸಿಕ್ಕಿದೆ. ಅವರ ನಟನೆ ಬಗ್ಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.