ಚಿತ್ರದುರ್ಗದ ಏಳು ಸುತ್ತಿನ ಕಲ್ಲಿನ ಕೋಟೆಯು ಒಂದೆ ಸಮಯದಲ್ಲಿ ನಿರ್ಮಾಣವಾಗದೆ ಕಾಲದ ಹಲವು ಸ್ತರಗಳಲ್ಲಿ ವಿವಿಧ ಆಡಳಿತಗಾರರ ಸುಪರ್ದಿಯಲ್ಲಿ ಹಂತ ಹಂತವಾಗಿ ನಿರ್ಮಾಣಗೊಂಡಿದೆ. ಇದರ ನಿರ್ಮಾಣದಲ್ಲಿ ರಾಷ್ಟ್ರಕೂಟರು, ಚಾಲುಕ್ಯರು, ಹೊಯ್ಸಳರು ತಮ್ಮ ಕೊಡುಗೆಯನ್ನು ನೀಡಿದ್ದಾರೆ. ಅದರಲ್ಲೂ ವಿಶೇಷವಾಗಿ ಮೈಸೂರು ರಾಜರ ಅಧೀನದಲ್ಲಿದ್ದ ನಾಯಕರು ಅಥವಾ ಪಾಳೇಗಾರರು ಹೆಚ್ಚಾಗಿ ತಮ್ಮ ಕೊಡುಗೆಯನ್ನು ಈ ಕೋಟೆಯ ನಿರ್ಮಾಣಕ್ಕೆ ಧಾರೆ ಎರೆದಿದ್ದಾರೆ.