
ಶುಂಠಿಯನ್ನು ಸೂಪರ್‌ಫುಡ್ ಎಂದು ಕರೆಯಲಾಗುತ್ತದೆ. ಇದು ಉರಿಯೂತದ ಗುಣಲಕ್ಷಣಗಳನ್ನು ದೂರ ಮಾಡುವ ಶಕ್ತಿ ಹೊಂದಿದೆ. ಇದು ಹೊಟ್ಟೆ ನೋವಿನಿಂದ ಪರಿಹಾರ ನೀಡುತ್ತದೆ. ಆದ್ದರಿಂದ, ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವಿನಿಂದ ಪರಿಹಾರ ಪಡೆಯಲು ಶುಂಠಿ ನೀರನ್ನು ಕುಡಿಯುವುದು ಉತ್ತಮ ಆಯ್ಕೆಯಾಗಿದೆ.

ಸ್ಮೂಥಿಗಳು ಮುಟ್ಟಿನ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ಎಲೆ, ಹಸಿರು ತರಕಾರಿಗಳಿಂದ ತಯಾರಿಸಲಾಗುತ್ತದೆ. ಕಿವಿ ಹಣ್ಣು ಮತ್ತು ಶುಂಠಿಯಿಂದ ಮಾಡಿದ ಹಸಿರು ಸ್ಮೂಥಿ ಜೀವಸತ್ವಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ಪಾಲಕ್ ಸ್ಮೂಥಿಯು ಮೆಗ್ನೀಸಿಯಮ್ ಮತ್ತು ಕಬ್ಬಿಣದಲ್ಲಿ ಸಮೃದ್ಧವಾಗಿದೆ.

ಬೆಲ್ಲವು ಅನೆಥೋಲ್ ಎಂಬ ಅಂಶವನ್ನು ಹೊಂದಿರುತ್ತದೆ. ಮುಟ್ಟಿನ ಸಂದರ್ಭದಲ್ಲಿ ಉಂಟಾಗುವ ಹೊಟ್ಟೆ ನೋವನ್ನು ಕಡಿಮೆ ಮಾಡಲು ನೀವು ಬೆಲ್ಲದ ಚಹಾವನ್ನು ಸಹ ಕುಡಿಯಬಹುದು. ನೋವು ನಿವಾರಣೆ ಮತ್ತು ಚಯಾಪಚಯ ಕ್ರಿಯೆಗೆ ಇದು ಪ್ರಯೋಜನಕಾರಿಯಾಗಿದೆ.

ನಿಮ್ಮನ್ನು ಹೈಡ್ರೀಕರಿಸಿಟ್ಟುಕೊಳ್ಳುವುದು ಆರೋಗ್ಯದ ಅತ್ಯಗತ್ಯ ಭಾಗವಾಗಿದೆ. ಅದರಲ್ಲೂ ಮುಟ್ಟಿನ ಸಂದರ್ಭದಲ್ಲಿ ಇದು ಹೆಚ್ಚು ಮುಖ್ಯವಾಗಿದೆ. ಮುಟ್ಟಿನ ಸಮಯದಲ್ಲಿ ನೀರು ಕುಡಿಯುವುದು, ಹೊಟ್ಟೆ ನೋವು, ಸೆಳೆತ ಮತ್ತು ಹೊಟ್ಟೆ ಉಬ್ಬುವಿಕೆಯನ್ನು ಕಡಿಮೆ ಮಾಡಲು ತುಂಬಾ ಪ್ರಯೋಜನಕಾರಿ. ಆದ್ದರಿಂದ, ಮುಟ್ಟಿನ ಸಮಯದಲ್ಲಿ ಸಾಕಷ್ಟು ನೀರು ಕುಡಿಯಿರಿ.

ಕ್ಯಾಮೊಮೈಲ್ ಚಹಾವು ಮುಟ್ಟಿನ ನೋವನ್ನು ನಿವಾರಿಸುತ್ತದೆ. ಕ್ಯಾಮೊಮೈಲ್ ಚಹಾವು ಹಿಪ್ಪುರೇಟ್ ಮತ್ತು ಗ್ಲೈಸಿನ್ ಅಂಶಗಳನ್ನು ಒಳಗೊಂಡಿದೆ. ಇವು ಸ್ನಾಯು ಸೆಳೆತವನ್ನು ನಿವಾರಿಸಲು ಕೂಡ ಸಹಾಯ ಮಾಡುತ್ತದೆ.