Cancer care: ಕ್ಯಾನ್ಸರ್ ತಡೆಗಟ್ಟುವ ಶಕ್ತಿಶಾಲಿ ಆಹಾರಗಳಿವು
ಆರೋಗ್ಯಕರ ಆಹಾರ ಕ್ರಮ, ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ.
Updated on: Jan 24, 2024 | 8:52 PM

ಕ್ಯಾನ್ಸರ್ ಹೆಸರು ಕೇಳಿದೊಡನೆ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ. ಯಾಕೆಂದರೆ ಈ ಮಾರಣಾಂತಿಕ ಕಾಯಿಲೆಯಿಂದ ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ.

ಆರೋಗ್ಯಕರ ಆಹಾರ ಕ್ರಮ, ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ.

ಪ್ರತಿದಿನ ಟೊಮೆಟೊ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಟೊಮೆಟೊದಲ್ಲಿ ಲೈಕೋಪೀನ್ ಎಂಬ ಉತ್ಕರ್ಷಣ ನಿರೋಧಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಬ್ರೊಕೊಲಿ: ನಿತ್ಯವೂ ಬ್ರೊಕೊಲಿಯನ್ನು ತಿನ್ನುವುದರಿಂದ ಅನ್ನನಾಳದ ಕ್ಯಾನ್ಸರ್, ಹೊಟ್ಟೆಯ ಕ್ಯಾನ್ಸರ್, ಬಾಯಿಯ ಕ್ಯಾನ್ಸರ್, ಲಾರೆಂಕ್ಸ್ ಕ್ಯಾನ್ಸರ್ ಬರದಂತೆ ತಡೆಯಬಹುದು.

ದ್ರಾಕ್ಷಿ:ದ್ರಾಕ್ಷಿಯಲ್ಲಿ ರೆಸ್ವೆರಾಟ್ರೊಲ್ ಎಂಬ ಉತ್ಕರ್ಷಣ ನಿರೋಧಕವಿದೆ. ಈ ಉತ್ಕರ್ಷಣ ನಿರೋಧಕವು ದೇಹದಲ್ಲಿ ಕ್ಯಾನ್ಸರ್ ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುತ್ತದೆ.

ಬೆರ್ರಿ ಹಣ್ಣುಗಳನ್ನು ತಿನ್ನುವುದು ಮೂತ್ರಕೋಶ, ಶ್ವಾಸಕೋಶ, ಸ್ತನ, ಅನ್ನನಾಳ ಮತ್ತು ಚರ್ಮದ ಕ್ಯಾನ್ಸರ್ ಅನ್ನು ತಡೆಯುತ್ತದೆ. ಹಾಗಾಗಿ ಆಗಾಗ ಬೆರ್ರಿ ಹಣ್ಣುಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.
Read More



