ಈ ವಾರ ಒಟಿಟಿಗೆ ಬಂದಿವೆ ಕೆಲ ಹಿಟ್ ಸಿನಿಮಾಗಳು: ಇಲ್ಲಿದೆ ಪಟ್ಟಿ

Updated on: Jul 19, 2025 | 4:28 PM

This week OTT Release: ಈ ಶುಕ್ರವಾರ ಕನ್ನಡದ ಎರಡು ಬಲು ನಿರೀಕ್ಷಿತ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿವೆ. ‘ಎಕ್ಕ’ ಮತ್ತು ‘ಜೂನಿಯರ್’ ಎರಡೂ ಸಿನಿಮಾಗಳು ಉತ್ತಮ ಪ್ರದರ್ಶನ ಕಾಣುತ್ತವೆ. ಅದರ ಜೊತೆಗೆ ಒಟಿಟಿಯಲ್ಲಿ ಸಹ ಕೆಲ ಒಳ್ಳೆಯ ಸಿನಿಮಾಗಳು ಈ ವಾರ ಬಿಡುಗಡೆ ಆಗಿವೆ. ಕನ್ನಡದ ಒಂದು ಸಿನಿಮಾ ಸೇರಿದಂತೆ ಪರಭಾಷೆಯ ಕೆಲ ಹಿಟ್ ಸಿನಿಮಾಗಳು ಸ್ಟ್ರೀಮಿಂಗ್ ಆರಂಭಿಸಿವೆ.

1 / 6
ಮಂಚು ಮನೋಜ್, ಸಾಯಿ ಶ್ರೀನಿವಾಸ್ ಬೆಲ್ಲಂಕೊಂಡ, ನಾರಾ ರೋಹಿತ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಭೈರವಂ’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಈ ಸಿನಿಮಾ ಈಗ ಜೀ5 ಒಟಿಟಿಯಲ್ಲಿ ಬಿಡುಗಡೆ ಆಗಿದೆ.

ಮಂಚು ಮನೋಜ್, ಸಾಯಿ ಶ್ರೀನಿವಾಸ್ ಬೆಲ್ಲಂಕೊಂಡ, ನಾರಾ ರೋಹಿತ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಭೈರವಂ’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಈ ಸಿನಿಮಾ ಈಗ ಜೀ5 ಒಟಿಟಿಯಲ್ಲಿ ಬಿಡುಗಡೆ ಆಗಿದೆ.

2 / 6

ಬೆಡಗಿ ಮೌನಿ ರಾಯ್, ಸಂಜಯ್ ದತ್ ಇನ್ನೂ ಕೆಲವು ನಟ-ನಟಿಯರು ನಟಿಸಿರುವ ‘ಭೂತಿನಿ’ ಹಾರರ್ ಕಾಮಿಡಿ ಸಿನಿಮಾ ನೇರವಾಗಿ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

3 / 6

ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ‘ಡಿಎನ್​ಎ’ ತಮಿಳು ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

4 / 6

ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ನಟಿಸಿ, ಶೇಖರ್ ಕಮ್ಮುಲ ನಿರ್ದೇಶನ ಮಾಡಿರುವ ‘ಕುಬೇರ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ಅಮೆಜಾನ್ ಪ್ರೈಂ ವಿಡಿಯೋನಲ್ಲಿ ವೀಕ್ಷಿಸಬಹುದಾಗಿದೆ.

5 / 6

ಅತ್ಯಾಚಾರ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ಮಡೆನೂರು ಮನು ನಟಿಸಿರುವ, ಯೋಗರಾಜ್ ಭಟ್ ಕತೆ ಬರೆದಿರುವ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

6 / 6

ನಾಚಿಕೆ ಸ್ವಭಾವದ ವಕೀಲನೊಬ್ಬ ಬಡ ತಂದೆಯೊಬ್ಬನಿಗೆ ಆದ ಅನ್ಯಾಯವನ್ನು ಕಣ್ಣಾರೆ ಕಂಡು ಆ ಕೇಸು ಕೈಗೆತ್ತಿಕೊಂಡು ಗೆಲ್ಲಿಸಿಕೊಡುವ ಕತೆಯನ್ನು ಒಳಗೊಂಡಿರುವ ಮಲಯಾಳಂ ವೆಬ್ ಸರಣಿ ಸತ್ತಮುಮ್ ನೀತಿಯುಂ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us