ಟಿಟಿ ವಾಹನದ ಟೈಯರ್ ಬ್ಲಾಸ್ಟ್ ಆಗಿ ಸರಣಿ ಅಪಘಾತ, ಮೂವರು ಸ್ಥಳದಲ್ಲೇ ಸಾವು
ಕ್ರಿಸ್ಮಸ್ ಹಬ್ಬದ ದಿನದಂದು ಕರ್ನಾಟಕದಲ್ಲಿ ಭೀಕರ ಅಪಘಾತಗಳ ಸಂಭವಿಸಿವೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿಯ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಎರಡು ಕಾರುಗಳ ಮಧ್ಯ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕಲಬುರಗಿ ಜಿಲ್ಲೆಯಲ್ಲಿ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.