ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಸಂಭವಿಸಿದ ಅಪಘಾತ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕಾಶ್ 20, ಹೇಮಂತ್ 28, ಶಿವಕುಮಾರ್ ಮೃತರು.
ಇನ್ನು ಅಪಘಾತದಲ್ಲಿ ಉಜ್ವಲ್ ಕೃಷ್ಣ ಗಾಯಗೊಂಡಿದ್ದು, ಅವರನ್ನು ತುಮಕೂರು(Tamukuru) ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಬೆಂಗಳೂರಿನಿಂದ ಪಾವಗಡ ಕಡೆ ತೆರಳುವಾಗ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರು-ಲಾರಿ ಡಿಕ್ಕಿಯಾಗಿವೆ.
ಡಿಕ್ಕಿಯಾದ ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಲಾರಿ ಪಾವಗಡದಿಂದ ತುಮಕೂರು ಕಡೆ ಬರುತ್ತಿತ್ತು. ಇನ್ನು ಕಾರು ಬೆಂಗಳೂರಿನಿಂದ ಪಾವಗಡ ಕಡೆ ತೆರಳುವಾಗ ಮುಖಾಮುಖಿ ಡಿಕ್ಕಿಯಾಗಿವೆ.
ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಪಾವಗಡ ಮೂಲದವರು ಎಂದು ತಿಳಿದುಬಂದಿದೆ.
Published On - 8:37 am, Tue, 26 September 23