- Kannada News Photo gallery Today CM Siddaramaiah Bangalore City Rounds, Inspection of various works, Kannada News
ಇಂದು ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ಸ್; ವಿವಿಧ ಕಾಮಗಾರಿ ಪರಿಶೀಲನೆ
ಬೆಂಗಳೂರು ಸಿಟಿ ರೌಂಡ್ಸ್‌ನ ಅಂಗವಾಗಿ ಇಂದು(ಸೆ.12) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ವಿವಿಧೆಡೆ ಬಸ್‌ನಲ್ಲಿ ಸಂಚರಿಸಿ, ರಸ್ತೆ, ಸೇತುವೆ, ಮೆಟ್ರೋ ಮುಂತಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಇದೇ ವೇಳೆ ಕೆಲವೆಡೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ಸರಿಪಡಿಸಬೇಕು ಹಾಗೂ ಈ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
Updated on: Sep 12, 2024 | 6:33 PM

ಬೆಂಗಳೂರು ಸಿಟಿ ರೌಂಡ್ಸ್‌ನ ಅಂಗವಾಗಿ ಇಂದು(ಸೆ.12) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ವಿವಿಧೆಡೆ ಬಸ್‌ನಲ್ಲಿ ಸಂಚರಿಸಿ, ರಸ್ತೆ, ಸೇತುವೆ, ಮೆಟ್ರೋ ಮುಂತಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ ಬಳಿಕ ನಮ್ಮ ಮೆಟ್ರೋ ಏರಿ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಿದರು.

ಕೆಲಕ್ಷಣಗಳ ಈ ಪಯಣದಲ್ಲಿ ಅವರು ನಿತ್ಯ ಮೆಟ್ರೋದಲ್ಲಿ ಸಂಚರಿಸುವ ಪ್ರಯಾಣಿಕರನ್ನು ಭೇಟಿಯಾಗಿ ಅವರ ಅನುಭವ ಕೇಳಿದರು. ಜೊತೆಗೆ ಮಕ್ಕಳ ಜೊತೆ ಮಗುವಾಗಿ ಸಮಯ ಕಳೆದರು.

ಯಾವುದೇ ಸಮಸ್ಯೆಯಿಲ್ಲದೆ ನಿಗದಿತ ಸಮಯಕ್ಕೆ ಸರಿಯಾಗಿ ತಲುಪಬಹುದಾದ ಮೆಟ್ರೋ ರೈಲು ಬೆಂಗಳೂರಿಗರ ಸಂಚಾರ ಜೀವನಾಡಿಯಾಗಿ ಬದಲಾಗುತ್ತಿದೆ. ಹೀಗಾಗಿ ಕಾಮಗಾರಿಗಳಿಗೆ ವೇಗ ನೀಡಿ, ನಗರದ ಬಹುತೇಕ ಪ್ರದೇಶಗಳಿಗೆ ಮೆಟ್ರೋ ಸಂಪರ್ಕ ಕಲ್ಪಿಸುವುದು ನಮ್ಮ ಗುರಿಯಾಗಿದೆ ಎಂದರು.

ಬಳಿಕ ಅಲ್ಲಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ಹೆಬ್ಬಾಳದ ಅಂಡರ್ ಪಾಸ್ ಹಾಗೂ ಫ್ಲೈ ಓವರ್ ಕಾಮಗಾರಿಯನ್ನು ವೀಕ್ಷಿಸಿ, ನಿಗದಿತ ಸಮಯದೊಳಗೆ ಕಾಮಗಾರಿಯನ್ನು ಮುಗಿಸಿ, ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದೇ ವೇಳೆ ಕೆಲವೆಡೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ಸರಿಪಡಿಸಬೇಕು ಹಾಗೂ ಈ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಇನ್ನು ಹೆಬ್ಬಾಳ ಫ್ಲೈ ಓವರ್ ಬಳಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಹೂಗುಚ್ಚ ನೀಡಲು ಕಾರ್ಯಕರ್ತರು, ಫ್ಯಾನ್ಸ್ ಮುಗಿಬಿದ್ದಿದ್ದರು. ಸಿಎಂಗೆ ಬಿಡಿಎ ಅಧ್ಯಕ್ಷ ಹ್ಯಾರೀಸ್, ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ ಅಧ್ಯಕ್ಷರು ಸಾಥ್ ನೀಡಿದರು.




