Updated on:Aug 09, 2021 | 7:01 PM
ಭಾರತದ ಕುಸ್ತಿಪಟು ರವಿ ದಹಿಯಾ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಫೈನಲ್ ತಲುಪಿದ ಎರಡನೇ ಕುಸ್ತಿಪಟು ಎನಿಸಿಕೊಂಡರು. ಅವರು 57 ಕೆಜಿ ವಿಭಾಗದ ಸೆಮಿಫೈನಲ್‌ನಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಅವರನ್ನು ಸೋಲಿಸಿ ಫೈನಲ್ಗೇರಿದ್ದಾರೆ. ಇದಕ್ಕೂ ಮುನ್ನ 2012 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಸುಶೀಲ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದರು. ಈ ಹಿಂದೆ, ದಹಿಯಾ ಎರಡೂ ಪಂದ್ಯಗಳನ್ನು ತಾಂತ್ರಿಕ ಪ್ರಾವೀಣ್ಯತೆಯ ಆಧಾರದ ಮೇಲೆ ಗೆದ್ದಿದ್ದರು.
ಈ ಪಂದ್ಯದ ಸಮಯದಲ್ಲಿ, ರವಿ ದಹಿಯಾ ಅವರ ಕೈಯನ್ನು ಎದುರಾಳಿ ಕುಸ್ತಿಪಟು ನೂರ್ ಇಸ್ಲಾಮ್ ಸನಾಯೆವ್ ಕಚ್ಚಿದರು. ಕೋರ್ಟ್ನಲ್ಲಿ ನೂರ್ ಇಸ್ಲಾಂನ ಭುಜವನ್ನು ರವಿ ನೆಲಕ್ಕೆ ತಾಗಿಸಲು ಪ್ರಯತ್ನಿಸುತ್ತಿದ್ದಾಗ ಇಸ್ಲಾಂ ಈ ಕೃತ್ಯ ಎಸಗಿದರು. ಆದರೆ ಭಾರತೀಯ ಕುಸ್ತಿಪಟು ನೋವನ್ನು ನುಂಗಿ ಎದುರಾಳಿಯ ಭುಜವನ್ನು ಸಂಪೂರ್ಣವಾಗಿ ನೆಲಕ್ಕೆ ತಾಗಿಸಿದರು.
ರವಿ ಅವರು ಪುರುಷರ 57 ಕೆ.ಜಿ. ವಿಭಾಗದ ಫ್ರೀ ಸ್ಟ್ರೈಲ್ ಕುಸ್ತಿ ಸ್ಪರ್ಧೆಯಲ್ಲಿ ಕೊಲಂಬಿಯಾದ ಅರ್ಬಾನೊ ಟೈಗರೋಸ್ ಎದುರು 13-2 ಅಂಕಗಳ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟಿದ್ದರು. ಕ್ವಾರ್ಟರ್ ಫೈನಲ್ನಲ್ಲಿ ಬಲ್ಜೆರಿಯಾದ ಜಾರ್ಗೀ ವಂಗೆಲೊವ್ ಎದುರು 14-4 ಅಂಕಗಳ ಅಂತರದಲ್ಲಿ ಅಮೋಘ ಗೆಲುವು ಸಾಧಿಸಿ ಸೆಮೀಸ್ಗೆ ಅರ್ಹತೆಗಿಟ್ಟಿಸಿಕೊಂಡಿದ್ದರು.
ಇನ್ನೂ ಭಾರತದ ಖ್ಯಾತ ಕುಸ್ತಿತಿಪಟು ರವಿಕುಮಾರ್ ಇತಿಹಾಸ ನಿರ್ಮಿಸಿದ್ದಾರೆ. ಬುಧವಾರ ನಡೆದ ಪುರುಷರ 57 ಕೆ.ಜಿ. ಫ್ರಿಸ್ಟೈಲ್ ವಿಭಾಗದ ಸೆಮಿಫೈನಲ್ ಮುಖಾಮುಖಿಯಲ್ಲಿ ರವಿಕುಮಾರ್ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆದ್ದು ಭಾರತಕ್ಕೆ ಮಗದೊಂದು ಪದಕ ಖಾತ್ರಿಪಡಿಸಿದ್ದಾರೆ.
ರವಿ ದಹಿಯಾ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಐದನೇ ಭಾರತೀಯ ಕುಸ್ತಿಪಟು. 1952 ಹೆಲ್ಸಿಂಕಿ ಒಲಿಂಪಿಕ್ಸ್‌ನಲ್ಲಿ ಕೆಡಿ ಜಾಧವ್ ಮೊದಲ ಬಾರಿಗೆ ಕಂಚಿನ ಪದಕ ಗೆದ್ದಿದ್ದರು. ಅವರ ನಂತರ ಸುಶೀಲ್ ಬೀಜಿಂಗ್‌ನಲ್ಲಿ ಕಂಚು ಮತ್ತು ಲಂಡನ್‌ನಲ್ಲಿ ಬೆಳ್ಳಿ ಗೆದ್ದರು.
ಸುಶೀಲ್ ಒಲಿಂಪಿಕ್ಸ್‌ನಲ್ಲಿ ಎರಡು ವೈಯಕ್ತಿಕ ಈವೆಂಟ್ ಪದಕಗಳನ್ನು ಗೆದ್ದ ಏಕೈಕ ಭಾರತೀಯರಾದರು. ಇತ್ತೀಚೆಗೆ ಪಿವಿ ಸಿಂಧು ಅವರನ್ನು ಸರಿಗಟ್ಟಿದರು. ಯೋಗೇಶ್ವರ್ ದತ್ ಲಂಡನ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಮತ್ತೊಂದೆಡೆ, ಸಾಕ್ಷಿ ಮಲಿಕ್ 2016 ರ ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು.
Published On - 10:51 pm, Wed, 4 August 21