Kashinath Naik: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಕಾಶಿನಾಥ್ ನಾಯ್ಕ್; ಇಲ್ಲಿವೆ ಚಿತ್ರಗಳು

ನೇರವಾಗಿ ಮೈದಾನಕ್ಕೆ ಮಕ್ಕಳನ್ನು ಕರೆದೊಯ್ದ ಅವರು ಜಾವೆಲಿನ್ ಕುರಿತು ಪ್ರಾತ್ಯಕ್ಷಿತೆ ನೀಡಿದರು. ಮಕ್ಕಳಿಂದ ಕ್ರಿಕೆಟ್ ಬಾಲ್ ಎಸೆದು ಅಭ್ಯಾಸ ಮಾಡಿಸಿದರು. ನಂತರ ಜಾವೆಲಿನ್ ಎಸೆತ ಮಾಡಿಸಿದರು. ದೂರದಲ್ಲಿರುವ ಮಾವಿನ ಮರಕ್ಕೆ ಕಲ್ಲು ಎಸೆದು ಕಾಯಿ ಕೊಯ್ಯುವ ಸಾಮರ್ಥ್ಯದ ಗ್ರಾಮೀಣ ಮಕ್ಕಳು ಉತ್ತಮ ಕ್ರೀಡಾಪಟುಗಳಾಗಬಲ್ಲರು ಎಂದು ಅವರು ಪ್ರೇರಣೆ ನೀಡಿದರು.

TV9 Web
| Updated By: guruganesh bhat

Updated on:Oct 05, 2021 | 4:49 PM

ಟೋಕಿಯೋ ಒಲಿಂಪಿಕ್ಸ್ನಲ್ಲಿ ಜಾವೆಲಿನ್ ಥ್ರೋದಲ್ಲಿ ಸ್ವರ್ಣ ಪದಕ ಗೆದ್ದ ನೀರಜ್ ಚೋಪ್ರಾಗೆ ತರಬೇತಿ ನೀಡಿದ್ದ ಕಾಶಿನಾಥ ನಾಯ್ಕ್ ಅವರಿಂದ ತರಬೇತಿ ಪಡೆಯುವ ಅವಕಾಶ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ವಿಶ್ವದರ್ಶನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದೊರೆತಿತ್ತು. ಮಂಗಳವಾರ (ಅಕ್ಟೋಬರ್ 5) ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆಗೆ ಆಗಮಿಸಿದ್ದ ಅವರಿಂದ ತರಬೇತಿ ಪಡೆದ ವಿದ್ಯಾರ್ಥಿಗಳು ಪುಳಕಿತರಾದರು..

Tokyo Olympics 2021 gold medal winner neeraj chopra coach Kashinath Naik trained high school students in Yellapur

1 / 7
ಈವೇಳೆ ಮಾತನಾಡಿದ ಕಾಶಿನಾಥ ನಾಯ್ಕ್ ‘ನನ್ನ ಕ್ರೀಡಾ ಸಾಧನೆಗೆ ಭಾರತೀಯ ಸೈನ್ಯವೇ ಪ್ರೇರಣೆ.  ಕಾರ್ಗಿಲ್ ಯುದ್ದದ ಅಂತ್ಯದ ವೇಳೆ ನಾನು ಸೇನೆ ಸೇರಿದೆ. ಅಲ್ಲಿನ ಕ್ರೀಡಾ ವಿಭಾಗ ಗಮನ ಸೆಳೆಯಿತು. ಅಲ್ಲಿ ಯಾವುದೇ ವಿಶೇಷ ತರಬೇತುದಾರರು ಇರಲಿಲ್ಲ. ಆಗ ಅಲ್ಲಿನ ಸೈನಾಧಿಕಾರಿಗಳೇ ಮಾರ್ಗದರ್ಶನ ನೀಡಿದರು. ಹೀಗಾಗಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು ಎಂದು ವಿವರಿಸಿದರು.

2 / 7
ಸಾಧನೆ ಮಾಡಬೇಕಾದರೆ ಕಷ್ಟಗಳು ಸಹಜ. ಕಷ್ಟಗಳನ್ನು ಮೀರಿ ಬದುಕಿದಾಗ ಮಾತ್ರ ಸಾಧನೆ ಸಾಧ್ಯ. ನನಗೂ ಸಾಕಷ್ಟು ಸಮಸ್ಯೆಗಳಿದ್ದವು. ಅದನ್ನು ಮೀರಿ ಗೆಲ್ಲಬೇಕು ಎಂಬ ಛಲ ಇತ್ತು. ಆ ಛಲವೇ ನನ್ನನ್ನು ಗೆಲ್ಲಿಸಿದೆ ಎಂದು ಹೇಳಿದರು. ಬನವಾಸಿಯಿಂದ 5 ಕಿಮೀ ದೂರದ ಹಳ್ಳಿಯಲ್ಲಿ ಹುಟ್ಟಿದ ನಾನು ಮೊದಲು ಕೂಲಿ ಕೆಲಸ ಮಾಡುತ್ತಿದ್ದೆ. ನಂತರ ಬೇಕರಿಯಲ್ಲಿ ದುಡಿದೆ. ಅನೇಕ ಅಡೆತಡೆಗಳನ್ನು ಎದುರಿಸಿ, ನಿರಂತರವಾಗಿ ಪ್ರಯತ್ನಿಸಿದ ಪರಿಣಾಮ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದೇನೆ ಎಂದು ಅವರು ಪ್ರೇರೇಪಿಸಿದರು.

3 / 7
ನೇರವಾಗಿ ಮೈದಾನಕ್ಕೆ ಮಕ್ಕಳನ್ನು ಕರೆದೊಯ್ದ ಅವರು ಜಾವೆಲಿನ್ ಕುರಿತು ಪ್ರಾತ್ಯಕ್ಷಿತೆ ನೀಡಿದರು. ಅದಾದ ನಂತರ ಮಕ್ಕಳಿಂದ ಕ್ರಿಕೆಟ್ ಬಾಲ್ ಎಸೆದು ಅಭ್ಯಾಸ ಮಾಡಿಸಿದರು. ನಂತರ ಜಾವೆಲಿನ್ ಎಸೆತ ಮಾಡಿಸಿದರು. ದೂರದಲ್ಲಿರುವ ಮಾವಿನ ಮರಕ್ಕೆ ಕಲ್ಲು ಎಸೆದು ಕಾಯಿ ಕೊಯ್ಯುವ ಸಾಮರ್ಥ್ಯದ ಗ್ರಾಮೀಣ ಮಕ್ಕಳು ಉತ್ತಮ ಕ್ರೀಡಾಪಟುಗಳಾಗಬಲ್ಲರು ಎಂದು ಅವರು ಪ್ರೇರಣೆ ನೀಡಿದರು.

4 / 7
ಕಾಶಿನಾಥ ನಾಯ್ಕ ಅವರನ್ನು ಸನ್ಮಾನಿಸಿದ ಲೆಕ್ಕ ಪರಿಶೋಧಕರಾದ ವಿಘ್ನೇಶ್ವರ ಗಾಂವ್ಕರ್ ಅವರು ಮಾತನಾಡಿ, ಮಕ್ಕಳು ಮಾನಸಿಕ ಹಾಗೂ ದೈಹಿಕ ಆರೋಗ್ಯ ಹೊಂದಿರಬೇಕು. ಸ್ಪರ್ಧಾತ್ಮಕ ಮನೋಭಾವನೆ ಬೆಳಸಿಕೊಳ್ಳಬೇಕು ಎಂದು ಕರೆ ನೀಡಿದರು. ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಅವರು ಇದ್ದರು. ವಿದ್ಯಾರ್ಥಿನಿ ನೀಕಿತಾ ಜಿ ನಾಯಕ ಪ್ರಾರ್ಥಿಸಿದರು. ರಾಘವೇಂದ್ರ ನಾಯ್ಕ ಸ್ವಾಗತಿಸಿದರು. ಮಹೇಶ ನಾಯ್ಕ ನಿರ್ವಹಿಸಿದರು. ಗುರು ಭಟ್ ವಂದಿಸಿದರು.

5 / 7
ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಿ ಜನಾಂಗದವರು ಹೆಚ್ಚಿದ್ದಾರೆ. ಅವರನ್ನು ಸೇರಿದಂತೆ ಅನೇಕ ಗ್ರಾಮೀಣ ಕ್ರೀಡಾ ಪ್ರತಿಭೆಗಳು ಇಲ್ಲಿವೆ. ಅವರಿಗೆ ಸೂಕ್ತ ವೇದಿಕೆ ದೊರೆಯದ ಕಾರಣ ಪ್ರತಿಭೆಗಳು ಅನಾವರಣಗೊಂಡಿಲ್ಲ. ಗ್ರಾಮೀಣ ಭಾಗದವರಿಗೆ ತರಬೇತಿ ನೀಡಿ ಅವರನ್ನು ಮುಖ್ಯ ವಾಹಿನಿಗೆ ತರುವ ಕನಸು ನನ್ನದು. ಹೀಗಾಗಿ ಮುಂದಿನ ವರ್ಷ ಕ್ರೀಡಾ ಅಕಾಡೆಮಿ ಸ್ಥಾಪಿಸುವ ಚಿಂತನೆಯಿದೆ ಎಂದು ರಾಷ್ಟ್ರೀಯ ಕ್ರೀಟಾಪಟು ಕಾಶಿನಾಥ ನಾಯ್ಕ ತಮ್ಮ ಕನಸನ್ನು ತೆರೆದಿಟ್ಟರು.

6 / 7
ಗ್ರಾಮೀಣ ಭಾಗದವರು ಸಾಧನೆ ಮಾಡಲು ಸಾಧ್ಯವಿಲ್ಲ ಎಂಬುದು ಸುಳ್ಳು. ಸಾಧನೆ ಮಾಡಲು ಮುಖ್ಯವಾಗಿ ಸ್ಪರ್ಧಾತ್ಮಕ ಮನೋಭಾವನೆ ಅಗತ್ಯವಿದೆ. ಮಕ್ಕಳು ಮೊಬೈಲ್‌ನಲ್ಲಿ ಆಟ ಆಡುವ ಬದಲು ಮೈದಾನದಲ್ಲಿ ಆಡಿದರೆ ಆರೋಗ್ಯ ದೊರೆಯುತ್ತದೆ. ಸ್ವಂತಕ್ಕಾಗಿ ಮಾಡಿದರೆ ಸ್ವಾರ್ಥ ಎನಿಸುತ್ತದೆ. ದೇಶಕ್ಕಾಗಿ ಮಾಡಿದಾಗ ದೊರೆಯುವ ಗೆಲುವಿನ ಸಂಭ್ರಮಕ್ಕೆ ಇಡೀ ದೇಶ ಸಾಕ್ಷಿಯಾಗುತ್ತದೆ ಎಂದು ಅವರು ಸ್ಪೂರ್ತಿದಾಯಕ ಮಾತನಾಡಿದರು.

7 / 7

Published On - 4:24 pm, Tue, 5 October 21

Follow us
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!

ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್

ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ

ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ

ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!

ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ

ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು

ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ

ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ