ಸಿದ್ದರಾಮಯ್ಯರ ಭೇಟಿ ಮಾಡಿದ ರಾಮ್ ಚರಣ್: ಚಿತ್ರಗಳಲ್ಲಿ ನೋಡಿ
CM Siddaramaiah-Ram Charan: ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ಅವರು ಮೈಸೂರಿನಲ್ಲಿ ‘ಪೆದ್ದಿ’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ರಾಮ್ ಚರಣ್ ಭೇಟಿ ಆದರು. ಇಬ್ಬರೂ ಸಹ ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ರಾಮ್ ಚರಣ್ ಅವರು ಸಿದ್ದರಾಮಯ್ಯ ಅವರಿಗೆ ಶಾಲು ಹೊದಿಸಿ ಸನ್ಮಾನ ಸಹ ಮಾಡಿದ್ದಾರೆ. ಇಲ್ಲಿವೆ ನೋಡಿ ಚಿತ್ರಗಳು.
Updated on: Aug 31, 2025 | 7:52 PM
Share

ತೆಲುಗಿನ ಸ್ಟಾರ್ ನಟ ರಾಮ್ ಚರಣ್, ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಆತ್ಮೀಯವಾಗಿ ಸನ್ಮಾನವನ್ನೂ ಸಹ ಮಾಡಿದ್ದಾರೆ.

ಮೈಸೂರಿನಲ್ಲಿನ ತಮ್ಮ ನಿವಾಸಕ್ಕೆ ರಾಮ್ ಚರಣ್ ಅವರನ್ನು ಸಿದ್ದರಾಮಯ್ಯ ಆಹ್ವಾನಿಸಿ ಅವರನ್ನು ಸನ್ಮಾನಿಸಿದ್ದಾರೆ. ಜೊತೆಗೆ ಕೆಲ ಸಮಯ ಚರ್ಚೆಯನ್ನೂ ಮಾಡಿದ್ದಾರೆ.

ರಾಮ್ ಚರಣ್ ಅವರ ನಟನೆಯ ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದಲೂ ನಡೆಯುತ್ತಿದೆ. ಶಿವಣ್ಣ ಸಹ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ರಾಮ್ ಚರಣ್ ಅವರು ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದಾಗ ಮಾಜಿ ಶಾಸಕ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಸಹ ಸ್ಥಳದಲ್ಲಿ ಹಾಜರಿದ್ದರು.

ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದ ಚಿತ್ರೀಕರಣವನ್ನು ಮೈಸೂರಿನಲ್ಲಿ ಮಾಡುತ್ತಿದ್ದು, ವಿಷಯ ತಿಳಿದ ಸಿದ್ದರಾಮಯ್ಯ ಅವರು ರಾಮ್ ಚರಣ್ ಅವರನ್ನು ಮನೆಗೆ ಆಹ್ವಾನಿಸಿದ್ದರು.
Related Photo Gallery
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ




