
ತೆಲುಗಿನ ಸ್ಟಾರ್ ನಟ ರಾಮ್ ಚರಣ್, ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಆತ್ಮೀಯವಾಗಿ ಸನ್ಮಾನವನ್ನೂ ಸಹ ಮಾಡಿದ್ದಾರೆ.

ಮೈಸೂರಿನಲ್ಲಿನ ತಮ್ಮ ನಿವಾಸಕ್ಕೆ ರಾಮ್ ಚರಣ್ ಅವರನ್ನು ಸಿದ್ದರಾಮಯ್ಯ ಆಹ್ವಾನಿಸಿ ಅವರನ್ನು ಸನ್ಮಾನಿಸಿದ್ದಾರೆ. ಜೊತೆಗೆ ಕೆಲ ಸಮಯ ಚರ್ಚೆಯನ್ನೂ ಮಾಡಿದ್ದಾರೆ.

ರಾಮ್ ಚರಣ್ ಅವರ ನಟನೆಯ ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದಲೂ ನಡೆಯುತ್ತಿದೆ. ಶಿವಣ್ಣ ಸಹ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ರಾಮ್ ಚರಣ್ ಅವರು ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದಾಗ ಮಾಜಿ ಶಾಸಕ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಸಹ ಸ್ಥಳದಲ್ಲಿ ಹಾಜರಿದ್ದರು.

ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದ ಚಿತ್ರೀಕರಣವನ್ನು ಮೈಸೂರಿನಲ್ಲಿ ಮಾಡುತ್ತಿದ್ದು, ವಿಷಯ ತಿಳಿದ ಸಿದ್ದರಾಮಯ್ಯ ಅವರು ರಾಮ್ ಚರಣ್ ಅವರನ್ನು ಮನೆಗೆ ಆಹ್ವಾನಿಸಿದ್ದರು.