Updated on: Aug 15, 2022 | 2:56 PM
ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಅವರು ಇಂದು 75ನೇ ವರ್ಷದ ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ವಿಶೇಷ ಫೋಟೋ ಹಂಚಿಕೊಂಡಿದ್ದಾರೆ.
ವಿಜಯ್ ದೇವರಕೊಂಡ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಮಹೇಶ್ ಬಾಬು ಹಾಗೂ ಅವರ ಮಗಳು ಸಿತಾರಾ ಕೈಯಲ್ಲಿ ಧ್ವಜ ಹಿಡಿದಿರುವ ಫೋಟೋ ಪೋಸ್ಟ್ ಮಾಡಿದ್ದಾರೆ.
ಚಿರಂಜೀವಿ ಅವರು ಧ್ವಜಕ್ಕೆ ಸೆಲ್ಯೂಟ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ.
ಹಾರಾಡುತ್ತಿರುವ ಧ್ವಜದ ವಿಡಿಯೋವನ್ನು ಪ್ರಭಾಸ್ ಅವರು ಶೇರ್ ಮಾಡಿದ್ದಾರೆ.
ರಾಜಮೌಳಿ ಕೂಡ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ್ದಾರೆ.