Upcoming CNG Cars: ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಟಾಪ್ 5 ಸಿಎನ್ಜಿ ಕಾರುಗಳಿವು!
ಭಾರತದಲ್ಲಿ ಸಿಎನ್ ಜಿ ಕಾರುಗಳ ಮಾರಾಟವು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳು ಸಿಎನ್ಜಿ ವರ್ಷನ್ ನಲ್ಲಿ ಮಾರುಕಟ್ಟೆ ಪ್ರವೇಶಿಸಲಿವೆ. ಹೊಸ ಕಾರುಗಳಲ್ಲಿ ಟಾಟಾ ನಿರ್ಮಾಣದ ಪ್ರಮುಖ ಕಾರುಗಳು ಹೊಸ ಆವೃತ್ತಿಗಳನ್ನು ಪಡೆದುಕೊಳ್ಳಲಿದ್ದು, ಬಿಡುಗಡೆಯಾಗಲಿರುವ ಹೊಸ ಸಿಎನ್ಜಿ ಕಾರುಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
2023ರಿಂದ ಕೇಂದ್ರ ಸರ್ಕಾರವು ಜಾರಿಗೆ ತರುತ್ತಿರುವ ರಿಯಲ್ ಎಮಿಷನ್ ಪರಿಣಾಮ ಕಾರು ಉತ್ಪಾದನಾ ಕಂಪನಿಗಳು ಪರಿಸರ ಸ್ನೇಹಿ ಕಾರು ಮಾದರಿಗಳತ್ತ ಮುಖ ಮಾಡುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಿಗೆ ಪರ್ಯಾಯವಾಗಿ ಹೈಬ್ರಿಡ್ ಮತ್ತು ಸಿಎನ್ ಜಿ ಕಾರುಗಳು ಮಾರುಕಟ್ಟೆ ಪ್ರವೇಶಿಸುತ್ತಿವೆ. ಇದರಲ್ಲಿ ಹೈಬ್ರಿಡ್ ಕಾರುಗಳು ದುಬಾರಿಯಾಗಿರುವುದರಿಂದ ಗ್ರಾಹಕರು ಅತಿ ಕಡಿಮೆ ನಿರ್ವಹಣಾ ವೆಚ್ಚ ಹೊಂದಿರುವ ಸಿಎನ್ ಜಿ ಮಾದರಿಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ.
ಸಿಎನ್ ಜಿ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮಾರುತಿ ಸುಜುಕಿ ಕಂಪನಿಯು ಸಿಎನ್ ಜಿ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದೆ. ಹೀಗಾಗಿ ಮಾರುತಿ ಸುಜುಕಿ ಕಾರುಗಳಿಗೆ ಪೈಪೋಟಿಯಾಗಿ ಇತರೆ ಕಾರು ಕಂಪನಿಗಳು ಸಹ ಪ್ರಮುಖ ಜನಪ್ರಿಯ ಕಾರುಗಳಲ್ಲಿ ಸಿಎನ್ ಜಿ ವರ್ಷನ್ ಬಿಡುಗಡೆಗೆ ಸಿದ್ದವಾಗುತ್ತಿವೆ. ಹಾಗಾದರೆ ಬಿಡುಗಡೆಯಾಗಲಿರುವ ಪ್ರಮುಖ ಸಿಎನ್ ಜಿ ಕಾರುಗಳು ಯಾವವು? ಮತ್ತು ಹೊಸ ಕಾರುಗಳ ವಿಶೇಷತೆಗಳೇನು? ಎನ್ನುವುದನ್ನು ಇಲ್ಲಿ ನೋಡೋಣ.