ನಟಿ ಮೇಘಾ ಶೆಟ್ಟಿ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮಾಡರ್ನ್ ಡ್ರೆಸ್ ಧರಿಸಿ ಅವರು ಫೋಟೋಶೂಟ್ ಮಾಡಿಸಿದ್ದಾರೆ.
ಅಭಿಮಾನಿಗಳ ವಲಯದಲ್ಲಿ ಈ ಫೋಟೋಗಳು ವೈರಲ್ ಆಗಿವೆ. ಅನೇಕರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಫೋಟೋ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ.
ಮೇಘಾ ಶೆಟ್ಟಿ ಹಂಚಿಕೊಂಡ ಈ ಹೊಸ ಫೋಟೋಗಳು ಅಭಿಮಾನಿಗಳಿಗೆ ಇಷ್ಟ ಆಗಿವೆ. ‘ಆದ್ರೂ ನೀವು ಸೀರೆಯಲ್ಲಿಯೇ ಹೆಚ್ಚು ಚೆನ್ನಾಗಿ ಕಾಣ್ತೀರಿ’ ಎಂದು ಹಲವರು ಕಮೆಂಟ್ ಮಾಡಿದ್ದಾರೆ.
ಕಿರುತೆರೆಯಲ್ಲಿ ಮೇಘಾ ಶೆಟ್ಟಿ ಅವರಿಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ಅದೇ ರೀತಿ, ಹಿರಿತೆರೆಯಲ್ಲೂ ಅವರು ಮಿಂಚುತ್ತಿದ್ದಾರೆ. ಒಳ್ಳೊಳ್ಳೆಯ ಅವಕಾಶಗಳು ಅವರಿಗೆ ಸಿಗುತ್ತಿವೆ.
ಗಣೇಶ್ ಜೊತೆ ‘ತ್ರಿಬಲ್ ರೈಡಿಂಗ್’ ಸಿನಿಮಾದಲ್ಲಿ ಮೇಘಾ ಶೆಟ್ಟಿ ನಟಿಸಿದ್ದಾರೆ. ಅವರ ಅಭಿನಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ. ಚಿತ್ರದ ಪ್ರಚಾರದಲ್ಲಿ ಅವರು ಬ್ಯುಸಿ ಆಗಿದ್ದಾರೆ.