Updated on: Nov 22, 2021 | 7:51 AM
Try These Home Remedies To control Constipation
ಕರುಳಿನ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡಲು ಪ್ರೋಬಯಾಟಿಕ್‌ಗಳು ಜನಪ್ರಿಯ ಆಹಾರವಾಗಿದೆ. ಇದು ಮಲಬದ್ಧತೆಗೆ ಚಿಕಿತ್ಸೆ ನೀಡಲು ಸಹ ಪರಿಣಾಮಕಾರಿಯಾಗಿದೆ. ಮೊಸರು ಮತ್ತು ಕೆಫೀರ್‌ನಂತಹ ಆಹಾರಗಳು ನೈಸರ್ಗಿಕ ಪ್ರೋಬಯಾಟಿಕ್‌ಗಳಾಗಿವೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿರುವವರು ಇದನ್ನು ನಿಯಮಿತವಾಗಿ ಸೇವಿಸಬೇಕು.
ಅನಾನಸ್ ಜ್ಯೂಸ್ ರುಚಿಕರ ಮಾತ್ರವಲ್ಲದೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ಬ್ರೋಮೆಲಿನ್ ಎಂಬ ಕಿಣ್ವವನ್ನು ಹೊಂದಿರುತ್ತದೆ. ಇದು ಮಲಬದ್ಧತೆ, ಹೊಟ್ಟೆ ಉಬ್ಬುವುದು ಮತ್ತು ಕಿಬ್ಬೊಟ್ಟೆಯ ಸೆಳೆತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಸೋಂಪು ಜೀರ್ಣಾಂಗ ವ್ಯವಸ್ಥೆಯಲ್ಲಿ ಸಹಕಾರಿಯಾಗಿದೆ. ನಿಮ್ಮ ಹೊಟ್ಟೆಯ ಆರೋಗ್ಯವನ್ನು ಸುಧಾರಿಸಲು, ಪ್ರತಿದಿನ ಅರ್ಧ ಟೀ ಚಮಚ ಸೋಂಪು ಪುಡಿಯನ್ನು ಒಂದು ಲೋಟ ಬೆಚ್ಚಗಿನ ನೀರಿನಲ್ಲಿ ಸೇರಿಸಿ ಕುಡಿಯಿರಿ. ಅಜೀರ್ಣ ಮತ್ತು ಹೊಟ್ಟೆ ಉಬ್ಬುವಿಕೆಯಂತಹ ಇತರ ಹೊಟ್ಟೆಯ ಸಮಸ್ಯೆಗಳಿಗೆ ಇದು ಪರಿಣಾಮಕಾರಿಯಾಗಿದೆ.
ಪುದೀನಾ ಆಂಟಿಸ್ಪಾಸ್ಮೊಡಿಕ್ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಇದು ಜೀರ್ಣಾಂಗವ್ಯೂಹದ ಸ್ನಾಯುಗಳಿಗೆ ರಕ್ಷಣೆ ನೀಡುತ್ತದೆ. ಇದು ಮಲಬದ್ಧತೆಗೆ ಸಂಬಂಧಿಸಿದ ಸಮಸ್ಯೆಯಿಂದ ಪರಿಹಾರವನ್ನು ನೀಡುತ್ತದೆ. ನೀವು ಒಂದು ಲೋಟ ಉಗುರುಬೆಚ್ಚಗಿನ ನೀರಿನಲ್ಲಿ 2-3 ಹನಿ ಪುದೀನಾ ತೈಲವನ್ನು ಬೆರೆಸಿದ ಕಷಾಯವನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬಹುದು. ಅಲ್ಲದೇ ಪುದೀನಾ ಚಹಾವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.