- Kannada News Photo gallery Udupi: Coast guard captured Suspicious foreign boat found in Malpe deep sea
ಉಡುಪಿ: ಮಲ್ಪೆ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಬೋಟ್ ಪತ್ತೆ
ಉಡುಪಿ, ಫೆಬ್ರವರಿ 25: ಉಡುಪಿ ಜಿಲ್ಲೆಯ ಮಲ್ಪೆ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಬೋಟ್ ಪತ್ತೆಯಾಗಿದೆ. ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದ್ದು, ಇದು ಓಮನ್ ಹಾರ್ಬರ್ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದ್ದ ಬೋಟ್ ಎಂಬುದು ತಿಳಿದುಬಂದಿದೆ. ಬೋಟ್ನಲ್ಲಿ ತಮಿಳುನಾಡು ಮೂಲದ ಮೀನುಗಾರರು ಪತ್ತೆಯಾಗಿದ್ದಾರೆ.
Updated on: Feb 25, 2025 | 11:39 AM

ಓಮನ್ ಮೂಲದ ಬೋಟ್ನಲ್ಲಿ ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದ ತಮಿಳುನಾಡು ಮೂಲದ ತಂಡ ಪತ್ತೆಯಾಗಿದೆ. ಈ ತಂಡದವರನ್ನು ವೇತನ ಹಾಗೂ ಆಹಾರ ನೀಡದೆ ಓಮನ್ ಬೋಟ್ ಮಾಲೀಕ ಸತಾಯಿಸುತ್ತಿದ್ದ ಎನ್ನಲಾಗಿದೆ.

ಬೋಟ್ನಲ್ಲಿ ಪತ್ತೆಯಾದವರಿಂದ ಪಾಸ್ಪೋರ್ಟ್ ವಶಕ್ಕೆ ಪಡೆದು ಬೋಟ್ ಮಾಲೀಕ ಚಿತ್ರಹಿಂಸೆ ನೀಡುತ್ತಿದ್ದ. ಪ್ರಾಣಭಯದಿಂದ ಓಮನ್ ಹಾರ್ಬರ್ನಿಂದ ಮೀನುಗಾರರು ತಪ್ಪಿಸಿಕೊಂಡು ಬಂದಿದ್ದರು. ಸಮುದ್ರ ಮಾರ್ಗದಲ್ಲಿ 4 ಸಾವಿರ ಕಿಲೋ ಕ್ರಮಿಸಿ ಭಾರತದ ಸಮುದ್ರ ತೀರಕ್ಕೆ ಬಂದಿದ್ದರು.

ವಿದೇಶಿ ಬೋಟ್ ಕಾರವಾರ ದಾಟಿ ಮಲ್ಪೆಯತ್ತ ಪ್ರಯಾಣಿಸಿದೆ. ಈ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ಹಣ, ಆಹಾರವಿಲ್ಲದೆ ಅದರಲ್ಲಿದ್ದವರು ಪರದಾಡಿದ್ದಾರೆ.

ಬಳಿಕ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಸ್ಥಳೀಯ ಮೀನುಗಾರರಿಗೆ ವಿದೇಶಿ ಬೋಟ್ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಕೋಸ್ಟ್ ಗಾರ್ಡ್ಗೆ ಮಾಹಿತಿ ರವಾನಿಸಿದ್ದಾರೆ.

ಸ್ಥಳೀಯ ಮೀನುಗಾರರು ನೀಡಿದ ಮಾಹಿತಿಯ ಮೇರೆಗೆ ಮಾಹಿತಿಯಿಂದ ಬೋಟ್ ಹಾಗೂ ಮೀನುಗಾರರನ್ನ ವಶಕ್ಕೆ ಪಡೆದ ಅಮರ್ಥ್ಯ ಕೋಸ್ಟ್ ಗಾರ್ಡ್ ಪರಿಶೀಲನೆ ನಡೆಸುತ್ತಿದೆ.

ಕೋಸ್ಟ್ ಗಾರ್ಡ್ ಶಿಪ್ ಸದ್ಯ ವಿದೇಶಿ ಹಡಗು ಹಾಗೂ ಮೀನುಗಾರರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪಾಸ್ ಪೋರ್ಟ್ ಇಲ್ಲದೆ ವಿದೇಶಿ ಹಡಗಿನಲ್ಲಿ ಗಡಿ ದಾಟಿದ ಹಿನ್ನಲೆ ಪ್ರಕರಣ ದಾಖಲಿಸಲಾಗಿದೆ. ಮೀನುಗಾರರು ಜೀವ ಭಯದಿಂದ ತಪ್ಪಿಸಿಕೊಂಡು ಬಂದಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.



















