
ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದಿದೆ (under construction bridge collapsed).

ಪರಿಣಾಮ ಏಳು ಜನರಿಗೆ ಗಾಯಗಳಾಗಿವೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಏಳು ಜನರಿಗೆ ಗಾಯಗಳಾಗಿವೆ.

ಕೂಡಲೇ ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಸೇತುವೆ ಕುಸಿದಿದ್ದು, ಈ ವೇಳೆ ಓರ್ವ ಕಾರ್ಮಿಕ ಸಿಲುಕಿದ್ದಾನೆ

ಇನ್ನುಳಿದ ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.