- Kannada News Photo gallery Union Minister George Kurian Visits relief camp at Kalpetta, Wayanad kannada news
ವಯನಾಡು ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವ ಜಾರ್ಜ್ ಕುರಿಯನ್
ಕೇರಳದಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಿಂದಾಗಿ 150ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪ್ರದೇಶಕ್ಕೆ ಕೇಂದ್ರ ಸಚಿವ ಜಾರ್ಜ್ ಕುರಿಯನ್ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
Updated on: Jul 31, 2024 | 11:47 AM

ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಜಾರ್ಜ್ ಕುರಿಯನ್ ಹೇಳಿದ್ದಾರೆ. ಸಂತ್ರಸ್ತರ ರಕ್ಷಣಾ ಕಾರ್ಯಗಳಿಗಾಗಿ ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಹೇಳಿದರು.

ಕುರಿಯನ್ ವಯನಾಡಿನಲ್ಲಿ ಭೂಕುಸಿತದಿಂದ ಗಾಯಗೊಂಡವರನ್ನು ಭೇಟಿ ಮಾಡಿ ಧೈರ್ಯ ತುಂಬುವ ಕೆಲಸ ಮಾಡಿದರು.

ಪರಿಸ್ಥಿತಿಯನ್ನು ಕೇಂದ್ರ ಸರ್ಕಾರವು ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡುತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ನನ್ನನ್ನು ನಿಯೋಜಿಸಿದ್ದಾರೆ ಎಂದು ಕುರಿಯನ್ ಹೇಳಿದರು.

ವಯನಾಡಿನಲ್ಲಿ ಮಂಗಳವಾರ ಸಂಭವಿಸಿದ ಭಾರೀ ಭೂಕುಸಿತದಲ್ಲಿ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ, ಈ ಸಂಖ್ಯೆಯು ಹೆಚ್ಚಾಗುವ ನಿರೀಕ್ಷೆಯಿದೆ.

ಅಗತ್ಯವಿರುವಂತೆ ಹೆಚ್ಚುವರಿ ಸಂಪನ್ಮೂಲಗಳನ್ನು ಕೇಂದ್ರದಿಂದ ಕಳುಹಿಸಲಾಗುವುದು ಎಂದು ಅವರು ಹೇಳಿದರು.

ಕೇಂದ್ರ ಸಚಿವ ಜಾರ್ಜ್ ಕುರಿಯನ್ ಪ್ರವಾಹ ಪೀಡಿತ ಪ್ರದೇಶವನ್ನು ಅವಲೋಕಿಸಿದ ಸಂದರ್ಭ




