ವಯನಾಡು ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವ ಜಾರ್ಜ್​ ಕುರಿಯನ್

|

Updated on: Jul 31, 2024 | 11:47 AM

ಕೇರಳದಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಿಂದಾಗಿ 150ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪ್ರದೇಶಕ್ಕೆ ಕೇಂದ್ರ ಸಚಿವ ಜಾರ್ಜ್​ ಕುರಿಯನ್ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

1 / 6
ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಜಾರ್ಜ್ ಕುರಿಯನ್ ಹೇಳಿದ್ದಾರೆ. ಸಂತ್ರಸ್ತರ ರಕ್ಷಣಾ ಕಾರ್ಯಗಳಿಗಾಗಿ ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಹೇಳಿದರು.

2 / 6
ಕುರಿಯನ್ ವಯನಾಡಿನಲ್ಲಿ ಭೂಕುಸಿತದಿಂದ ಗಾಯಗೊಂಡವರನ್ನು ಭೇಟಿ ಮಾಡಿ ಧೈರ್ಯ ತುಂಬುವ ಕೆಲಸ ಮಾಡಿದರು.

3 / 6
ಪರಿಸ್ಥಿತಿಯನ್ನು ಕೇಂದ್ರ ಸರ್ಕಾರವು ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡುತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ನನ್ನನ್ನು ನಿಯೋಜಿಸಿದ್ದಾರೆ ಎಂದು ಕುರಿಯನ್ ಹೇಳಿದರು.

4 / 6
ವಯನಾಡಿನಲ್ಲಿ ಮಂಗಳವಾರ ಸಂಭವಿಸಿದ ಭಾರೀ ಭೂಕುಸಿತದಲ್ಲಿ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ, ಈ ಸಂಖ್ಯೆಯು ಹೆಚ್ಚಾಗುವ ನಿರೀಕ್ಷೆಯಿದೆ.

5 / 6
ಅಗತ್ಯವಿರುವಂತೆ ಹೆಚ್ಚುವರಿ ಸಂಪನ್ಮೂಲಗಳನ್ನು ಕೇಂದ್ರದಿಂದ ಕಳುಹಿಸಲಾಗುವುದು ಎಂದು ಅವರು ಹೇಳಿದರು.

6 / 6
ಕೇಂದ್ರ ಸಚಿವ ಜಾರ್ಜ್ ಕುರಿಯನ್ ಪ್ರವಾಹ ಪೀಡಿತ ಪ್ರದೇಶವನ್ನು ಅವಲೋಕಿಸಿದ ಸಂದರ್ಭ